ADVERTISEMENT

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಿದ್ಧತೆ!

ಕಾರವಾರ, ಅಂಕೋಲಾದಲ್ಲಿ ಪ್ರತ್ಯೇಕ ಸಮಾರಂಭ: ಡಿಸಿ ಸಭೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 7:27 IST
Last Updated 18 ಫೆಬ್ರುವರಿ 2026, 7:27 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುವ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸಭೆ ನಡೆಸಿದರು.</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುವ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸಭೆ ನಡೆಸಿದರು.

   

ಕಾರವಾರ: ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಫೆ.22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಆರಂಭಿಸಿದೆ.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) 450 ಹಾಸಿಗೆ ಸಾಮರ್ಥ್ಯದ ಹೊಸ ಕಟ್ಟಡ, ಪ್ರಜಾಸೌಧ, ಗಂಗಾವಳಿ–ಮಂಜಗುಣಿ ಸೇತುವೆ ಉದ್ಘಾಟನೆ ನೆರವೇರಿಸಲು ಮುಖ್ಯಮಂತ್ರಿ ಬರಲು ಒಪ್ಪಿದ್ದಾಗಿ ಶಾಸಕ ಸತೀಶ ಸೈಲ್ ಹೇಳಿದ್ದರು.

ADVERTISEMENT

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಳ್ಳಲು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಮಂಗಳವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮುಖ್ಯಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮ ಆಯೋಜನೆಗೆ ಸೂಕ್ತ ಸ್ಥಳ ನಿಗದಿಪಡಿಸಬೇಕು. ಅಲ್ಲಿ ಭದ್ರತೆ, ವಾಹನ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

‘ಮುಖ್ಯಮಂತ್ರಿ ಕ್ರಿಮ್ಸ್‌ಗೆ ಭೇಟಿ ನೀಡಲಿದ್ದು, ಆಸ್ಪತ್ರೆಯ ಸ್ಥಿತಿಗತಿ ಪರಿಶೀಲಿಸಲಿದ್ದಾರೆ. ಇದೇ ವೇಳೆ ಕ್ರಿಮ್ಸ್ ಆವರನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಹೊಸ ಕಟ್ಟಡ ಉದ್ಘಾಟಿಸುವರು. ಬಳಿಕ ಅಂಕೋಲಾ ತಾಲ್ಲೂಕಿನ ಮಂಜಗುಣಿಗೆ ತೆರಳಿ ಅಲ್ಲಿ ಗಂಗಾವಳಿ–ಮಂಜಗುಣಿ ಸೇತುವೆ ಉದ್ಘಾಟಿಸುವ ಸಾಧ್ಯತೆ ಇದೆ. ಆದರೆ, ಈವರೆಗೂ ಭೇಟಿಯ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ’ ಎಂದು ಅಧಿಕಾರಿಯೊಬ್ಬರು ಹೇಳಿದರು.

ಸಂತೆ ಸ್ಥಳಾಂತರ

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಸಾಧ್ಯತೆ ಹಿನ್ನೆಲೆಯಲ್ಲಿ ಫೆ.22ರಂದು ನಗರದಲ್ಲಿ ನಡೆಯುವ ಸಂತೆ ಮಾರುಕಟ್ಟೆಯನ್ನು ದೋಬಿಘಾಟ್ ರಸ್ತೆಗೆ ಸ್ಥಳಾಂತರಿಸಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಆದೇಶಿಸಿದ್ದಾರೆ.

‘ಪ್ರತಿ ವಾರ ಸಂತೆ ನಡೆಯುವ ಎಂ.ಜಿ.ರಸ್ತೆ, ಕೋರ್ಟ್ ರಸ್ತೆ, ಪಿಕಳೆ ರಸ್ತೆಗಳಲ್ಲಿ ಅಂದು ಸಂತೆ ನಡೆಸಲು ಅವಕಾಶವಿಲ್ಲ’ ಎಂದು ತಿಳಿಸಿದ್ದಾರೆ.