
ಪ್ರಜಾವಾಣಿ ವಾರ್ತೆವಸಂತ ನಾಯ್ಕ
ಸಿದ್ದಾಪುರ: ತಾಲ್ಲೂಕಿನ ಅವರಗುಪ್ಪದಲ್ಲಿ ಕೌಟುಂಬಿಕ ಕಲಹ ಬಿಡಿಸಲು ಬಂದ ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಘಟನೆ ಸೋಮವಾರ ರಾತ್ರಿ ನಡೆದಿದೆ.
ವಸಂತ ನಾಯ್ಕ ಹತ್ಯೆಯಾದವರು. ಗ್ರಾಮದ ಮನೆಯೊಂದರಲ್ಲಿ ತಾಯಿ-ಮಗಳ ನಡುವೆ ನಡೆದ ಗಲಾಟೆ ಬಿಡಿಸಲು ಹೋದ ವೇಳೆ ವಸಂತ ಅವರನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಸಿದ್ದಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮಹೇಶ ನಾಯ್ಕ ಹಾಗೂ ಕುಮಾರ ನಾಯ್ಕ ಎಂಬುವವರಿಗೆ ತೀವ್ರ ಗಾಯಗಳಾಗಿವೆ.
'ಹತ್ಯೆ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸುಚಿತ್ರಾ ನಾಯ್ಕ ಸೇರಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.