ಭಟ್ಕಳ: ಉಡುಪಿ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಅನಿವಾಸಿ ಭಾರತೀಯರಾದ ವಾಮನ್ ರಾಮನಾಥ ಶಾನಭಾಗ್ ಉದ್ಘಾಟಿಸಿದರು.
ಆಸ್ಪತ್ರೆಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಆಸ್ಪತ್ರೆಗೆ ಅಗತ್ಯ ಇರುವ ಸುಸಜ್ಜಿತ 10 ಹಾಸಿಗೆಯುಳ್ಳ ಅಪಘಾತ ಚಿಕಿತ್ಸಾ ವಿಭಾಗವನ್ನು ಅಂದಾಜು ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಉಪವಿಭಾಗಾಧಿಕಾರಿ ಕಾವ್ಯರಾಣಿ ಕೆ.ವಿ., ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಸವಿತಾ ಕಾಮತ್, ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ, ಉಡುಪಿ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ತಂಝೀಂ ಕಾರ್ಯದರ್ಶಿ ಅಬ್ದುಲ್ ರಕೀಬ್, ಆನಂದ ಆಶ್ರಮ ಪ್ರೌಢಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಲವೀನಾ ಜ್ಯೋತಿ ಮಾತನಾಡಿದರು. ಜಿ.ಎಸ್.ಬಿ. ಮುಖಂಡ ನರೇಂದ್ರ ನಾಯಕ, ಸಮಾಜ ಸೇವಕ ನಝೀರ ಕಾಶೀಂಜೀ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.