ADVERTISEMENT

ಹೊನ್ನಾವರ | ಶಿಕ್ಷಣ ಕ್ಷೇತ್ರಕ್ಕೆ ದಿನಕರ ದೇಸಾಯಿ ಕೊಡುಗೆ ಅಪಾರ: ಎಚ್.ಎಸ್.ಗುನಗ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 6:59 IST
Last Updated 13 ಸೆಪ್ಟೆಂಬರ್ 2025, 6:59 IST
ಹೊನ್ನಾವರ ತಾಲ್ಲೂಕಿನ ಕಾಸರಕೋಡ ಜನತಾ ವಿದ್ಯಾಲಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದ ವಿದ್ಯಾಥರ್ಿಗಳಿಗೆ ಬಹುಮಾನ ವಿತರಿಸಲಾಯಿತು.
ಹೊನ್ನಾವರ ತಾಲ್ಲೂಕಿನ ಕಾಸರಕೋಡ ಜನತಾ ವಿದ್ಯಾಲಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದ ವಿದ್ಯಾಥರ್ಿಗಳಿಗೆ ಬಹುಮಾನ ವಿತರಿಸಲಾಯಿತು.   

ಹೊನ್ನಾವರ: ರಾಜಕೀಯ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿರುವ ದಿನಕರ ದೇಸಾಯಿ ಅವರು ಜಿಲ್ಲೆಯಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ಸದಾ ಸ್ಮರಣೀಯರಾಗಿದ್ದಾರೆ ಎಂದು ಸಾಹಿತಿ ಎಚ್.ಎಸ್.ಗುನಗ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ನ ತಾಲ್ಲೂಕು ಘಟಕದ ಸಹಯೋಗದಲ್ಲಿ ದಿನಕರ ದೇಸಾಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಕಾಸರಕೋಡ ಜನತಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ದಿನಕರರ ಕೊಡುಗೆ ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಅರ್ಬನ್ ಬ್ಯಾಂಕ್ ನ ನಿವೃತ್ತ ವ್ಯಸವ್ಥಾಪಕ ಎಸ್.ಟಿ. ಹೊರ್ಟಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ADVERTISEMENT

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಚ್.ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ಕೋಶಾಧ್ಯಕ್ಷ ನಾರಾಯಣ ಹೆಗಡೆ, ನಿವೃತ್ತ ಮುಖ್ಯ ಶಿಕ್ಷಕ ಎಂ.ಎಚ್.ನಾಯ್ಕ, ಗ್ರಂಥಪಾಲಕ ಮಂಜುನಾಥ ಗೌಡ, ಮುಖ್ಯ ಶಿಕ್ಷಕ ರವಿ ಪೂಜಾರಿ ಭಾಗವಹಿಸಿದ್ದರು.

ದಿನಕರ ದೇಸಾಯಿ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.