ADVERTISEMENT

ಪ್ರತಿ ತಾಲೂಕಿನಲ್ಲೂ ವಿದ್ಯುತ್ ಚಿತಾಗಾರ ಸ್ಥಾಪಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 12:40 IST
Last Updated 7 ಜುಲೈ 2020, 12:40 IST
ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಜನಶಕ್ತಿ ವೇದಿಕೆಯ ಅಧ್ಯಕ್ಷ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ಮಂಗಳವಾರ ಕಾರವಾರದಲ್ಲಿ ಮನವಿ ಸಲ್ಲಿಸಿದರು
ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಜನಶಕ್ತಿ ವೇದಿಕೆಯ ಅಧ್ಯಕ್ಷ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ಮಂಗಳವಾರ ಕಾರವಾರದಲ್ಲಿ ಮನವಿ ಸಲ್ಲಿಸಿದರು   

ಕಾರವಾರ: ದೇಶದಾದ್ಯಂತ ಕೋವಿಡ್ 19ನಿಂದ ಮೃತರ ಶವಗಳನ್ನು ವಿದ್ಯುತ್ ಚಿತಾಗಾರದಲ್ಲೇ ಸುಡಬೇಕು ಎಂಬ ಬಗ್ಗೆ ನಿಯಮಾವಳಿ ರೂಪಿಸಬೇಕು. ಇದಕ್ಕಾಗಿ ಪ್ರತಿ ತಾಲ್ಲೂಕುಗಳಲ್ಲಿ ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಬೇಕು ಎಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಆಗ್ರಹಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗೆ ಅವರು ಪತ್ರ ಬರೆದಿದ್ದು, ಜಿಲ್ಲಾಧಿಕಾರಿ ಮೂಲಕ ಮಂಗಳವಾರ ಮನವಿ ಸಲ್ಲಿಸಿದ್ದಾರೆ.

ದೇಶದಾದ್ಯಂತ ಕೋವಿಡ್‌ನಿಂದ ಮೃತರ ಶವಗಳನ್ನು ಅಗೌರವಯುತವಾಗಿ ಸಂಸ್ಕಾರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಅದನ್ನು ಹೋಗಲಾಡಿಸಲು ವಿದ್ಯುತ್ ಚಿತಾಗಾರಗಳ ಸ್ಥಾಪನೆಯಿಂದ ಸಾಧ್ಯವಿದೆ. ಇದಕ್ಕೆ ಸ್ಮಶಾನದಂತೆ ಹೆಚ್ಚಿನ ಜಾಗ ಹಾಗೂ ಕಟ್ಟಿಗೆಯ ಅವಶ್ಯಕತೆಯಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವು ಈ ಸಂಬಂಧ ನಿಯಮಾವಳಿ ರೂಪಿಸಿ, ಸರ್ಕಾರಿ ಜಾಗದಲ್ಲಿ ಚಿತಾಗಾರ ಆರಂಭಿಸಬೇಕು ಎಂದು ಒತ್ತಾಯಸಿದ್ದಾರೆ.

ADVERTISEMENT

ಈ ಕ್ರಮದಿಂದ ಮೃತರ ಕುಟುಂಬ ಸದಸ್ಯರಿಗೆ ತಕ್ಕಮಟ್ಟಿಗೆ ಸಾಂತ್ವನ ಹೇಳಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಕಾಶಿನಾಥ, ಸಂದೇಶ ಎಸ್ ಹಾಗೂ ಅನು ಕಳಸ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.