ADVERTISEMENT

ಕಾರವಾರ: ಕೆಎಸ್‌ಆರ್‌ಟಿಸಿ ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 15:27 IST
Last Updated 12 ಏಪ್ರಿಲ್ 2025, 15:27 IST
<div class="paragraphs"><p>ಕಾರವಾರ ತಾಲ್ಲೂಕಿನ ಬಾಳೆಮನೆ ಸಮೀಪ ಕಾರವಾರ–ಸುಳಗೇರಿ ಮಾರ್ಗದಲ್ಲಿ ಸಾಗುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿತ್ತು</p></div>

ಕಾರವಾರ ತಾಲ್ಲೂಕಿನ ಬಾಳೆಮನೆ ಸಮೀಪ ಕಾರವಾರ–ಸುಳಗೇರಿ ಮಾರ್ಗದಲ್ಲಿ ಸಾಗುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿತ್ತು

   

ಕಾರವಾರ: ತಾಲ್ಲೂಕಿನ ಬಾಳೆಮನೆ ಅರಣ್ಯ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮೇಲೆ ವಿದ್ಯುತ್ ಕಂಬ ಉರುಳಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಕಾರವಾರದಿಂದ ಸುಳಗೇರಿ ಗ್ರಾಮಕ್ಕೆ ತೆರಳುತ್ತಿದ್ದ ರಾತ್ರಿ ವಾಸ್ತವ್ಯದ ಬಸ್ ಮೇಲೆ ಕಂಬ ಬಿದ್ದಿದ್ದು ಬಸ್‍ಗೆ ಹಾನಿಯಾಗಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕ, ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ADVERTISEMENT

‘ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ನಡೆದ ಬಗ್ಗೆ ಮಾಹಿತಿ ನೀಡಿದರೂ ಕಂಬ ತೆರವುಗೊಳಿಸಲು ಹೆಸ್ಕಾಂ ಸಿಬ್ಬಂದಿ ಹಲವು ತಾಸು ವಿಳಂಬ ಮಾಡಿದರು’ ಎಂದು ಬಾಳೆಮನೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.