ದಾಂಡೇಲಿ: ಕಾಂಗ್ರೆಸ್ ತನ್ನ ಅಧಿಕಾರದ ದಾಹಕ್ಕೆ ದೇಶದ ಹಿತಾಸಕ್ತಿ ಬಲಿಕೊಟ್ಟು ಸ್ವಾರ್ಥದ ರಾಜಕಾರಣ ಮಾಡಿದ್ದು ಇತಿಹಾಸದಲ್ಲೇ ನಡೆದ ಅತಿದೊಡ್ಡ ದುರಂತ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು.
ನಗರದ ಮರಾಠ ಸಮಾಜ ಕಾರ್ಯಾಲಯದಲ್ಲಿ ಶನಿವಾರ ನಡೆದ ತುರ್ತು ಪರಿಸ್ಥಿತಿಯ ಕರಾಳ ಇತಿಹಾಸಕ್ಕೆ 50 ವರ್ಷ ಭಾರತೀಯ ಪ್ರಜಾಪ್ರಭುತ್ವದ ಕರಾಳ ಅಧ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕರಾಳ ದಿನಗಳಲ್ಲಿ ಹಲವಾರು ರಾಜಕೀಯ ನಾಯಕರನ್ನು ಜೈಲಿಗೆ ಹಾಕಿ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುವ ಮೂಲಕ ಪ್ರಜೆಗಳಿಗೆ ಅನ್ಯಾಯ ಮಾಡಿದ್ದಾರೆ. ಈ ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನದ ಎಲ್ಲ ಆಯಾಮಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದು ದುರಂತ ಎಂದರು.
ಉತ್ತರ ಕನ್ನಡ ಜಿಲ್ಲಾ ನಿಕಟ ಪೂರ್ವ ಜಿಲ್ಲಾ ಘಟಕದ ಅಧ್ಯಕ್ಷ ಕುಮಟಾದ ವೆಂಕಟೇಶ್ ನಾಯಕ ಮಾತನಾಡಿದರು.
ಮಂಡಲ ಅಧ್ಯಕ್ಷ ಬದುವಂತಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸನಿ ಮಾತನಾಡಿದರು.
ಹಳಿಯಾಳ ಮಂಡಲ ಪ್ರಧಾನ ಕಾರ್ಯದರ್ಶಿ ಸಂತೋಷ್ ಘಟಕಾಂಬಳೆ, ಹಳಿಯಾಳ ಮಂಡಲ ಅಧ್ಯಕ್ಷ ವಿಠ್ಠಲ್ ಸಿದ್ದಣ್ಣವರ, ಪ್ರಶಾಂತ ದೇಶಪಾಂಡೆ , ಮಿಥುನ ನಾಯಕ, ಗಿರೀಶ್ ಟೋಸುರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.