ADVERTISEMENT

ಹಳಿಯಾಳ: ಕಠಿಣ ಕ್ರಮಕ್ಕೆ ನೌಕರರ ಆಗ್ರಹ

ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 4:06 IST
Last Updated 30 ಜುಲೈ 2021, 4:06 IST
ಅರಣ್ಯ ಇಲಾಖೆ ಸಿಬ್ಬಂದಿ ನೇಹಾ ತಳವಾರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಳಿಯಾಳದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು
ಅರಣ್ಯ ಇಲಾಖೆ ಸಿಬ್ಬಂದಿ ನೇಹಾ ತಳವಾರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಳಿಯಾಳದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು   

ಹಳಿಯಾಳ: ತಾಲ್ಲೂಕಿನ ಭಾಗವತಿ ಗ್ರಾಮದ ಭೀಮನಳ್ಳಿ ಅರಣ್ಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ತೆರಳಿದ್ದ ಮಹಿಳಾ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಹಳಿಯಾಳ ತಾಲ್ಲೂಕು ಘಟಕದ ವತಿಯಿಂದ ಗ್ರೇಡ -2 ತಹಶೀಲ್ದಾರ್ ರತ್ನಾಕರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಭಾಗವತಿ ಅರಣ್ಯ ವ್ಯಾಪ್ತಿಯ ಭೀಮನಳ್ಳಿಯಲ್ಲಿ ಕರ್ತವ್ಯ ನಿರತ ಅರಣ್ಯ ಇಲಾಖೆಯ ಅಧಿಕಾರಿ ಸ್ನೇಹಾ ಶಿವಾಜಿ ತಳವಾರ ಇವರ ಮೇಲೆ ಕರ್ತವ್ಯ ನಿರ್ವಹಿಸುವಾಗ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಹಲ್ಲೆ ಮಾಡಿದ್ದನ್ನು ಸಂಘ ತೀವ್ರವಾಗಿ ಖಂಡಿಸಿದೆ.

ಸರ್ಕಾರಿ ‌ನೌಕರರು ಕರ್ತವ್ಯ ನಿರ್ವಹಿಸುವಾಗ ಹಿಂದೆಯೂ ಹಲವಾರು ಬಾರಿ ಹಲ್ಲೆ ನಡೆದಿದ್ದು, ಇದಕ್ಕೆ ಕಡಿವಾಣ ಬೀಳಬೇಕು. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ರಾಜ್ಯ ಸರ್ಕಾರಿ ನೌಕರರ ಸಂಘದ ಹಳಿಯಾಳ ಘಟಕದ ಅಧ್ಯಕ್ಷ ಪ್ರಶಾಂತ ನಾಯ್ಕ, ಪದಾಧಿಕಾರಿ ಪ್ರಕಾಶ ಪೂಜಾರಿ, ರಮೇಶ ಲಮಾಣಿ, ರುದ್ರಮೂರ್ತಿ ತಳವಾರ, ಲಕ್ಷ್ಮೀ ಶಿಂಧೆ, ರಾಮಕ್ಕಾ , ಅಥಡಕರ, ಹಾಗೂ ಅರಣ್ಯ , ಆರೋಗ್ಯ , ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.