ADVERTISEMENT

ಬನವಾಸಿ: ಯಾತ್ರಾರ್ಥಿಗಳ ಪ್ರವೇಶ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 14:00 IST
Last Updated 18 ಮಾರ್ಚ್ 2020, 14:00 IST
ಶಿರಸಿ ತಾಲ್ಲೂಕಿನ ಬನವಾಸಿ ಮಧುಕೇಶ್ವರ ದೇವಾಲಯಕ್ಕೆ ಯಾತ್ರಾರ್ಥಿಗಳ ಪ್ರವೇಶ ನಿರ್ಬಂಧಿಸಿ ಫಲಕ ಹಾಕಲಾಗಿದೆ. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದರು
ಶಿರಸಿ ತಾಲ್ಲೂಕಿನ ಬನವಾಸಿ ಮಧುಕೇಶ್ವರ ದೇವಾಲಯಕ್ಕೆ ಯಾತ್ರಾರ್ಥಿಗಳ ಪ್ರವೇಶ ನಿರ್ಬಂಧಿಸಿ ಫಲಕ ಹಾಕಲಾಗಿದೆ. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದರು   

ಶಿರಸಿ: ಪುರಾತತ್ವ ಇಲಾಖೆಯ ಆದೇಶದನ್ವಯ ಕೊರೊನಾ ವೈರಸ್‌ ನಿಯಂತ್ರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ತಾಲ್ಲೂಕಿನ ಬನವಾಸಿಯ ಐತಿಹಾಸಿಕ ಮಧುಕೇಶ್ವರ ದೇವಾಲಯಕ್ಕೆ ಮಾ.31ರವರೆಗೆ ಯಾತ್ರಾರ್ಥಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜಶೇಖರ ಒಡೆಯರ್ ತಿಳಿಸಿದ್ದಾರೆ.

ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್‌ನಿಂದ ಜನರಿಗೆ ಯಾವುದೇ ತೊಂದರೆ ಆಗದಂತೆ, ವಿಶ್ವದ ಜನಸಂಕುಲವನ್ನು ರಕ್ಷಿಸುವಂತೆ ಮಧುಕೇಶ್ವರ ದೇವರಿಗೆ ಪೂಜೆ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಹರೀಶಕುಮಾರ್ ಅವರಿಗೆ ಪೂಜೆಯ ಪ್ರಸಾದ ಕಳುಹಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ.ಜಿ.ಎ.ಹೆಗಡೆ ಸೋಂದಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT