ADVERTISEMENT

ಪರಿಸರ ಸಂರಕ್ಷಣೆ ನಿತ್ಯ ನಡೆಯಬೇಕು: ಆರ್.ವಿ.ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 13:38 IST
Last Updated 5 ಜೂನ್ 2025, 13:38 IST
<div class="paragraphs"><p>ದಾಂಡೇಲಿಯ ನಗರಸಭೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ದಾಂಡೇಲಿ ಎಸಿಎಫ್ ಸಂತೋಷ ಚೌಹಾಣ್ ಪರಿಸರ ಜಾಗೃತಿಗಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.</p></div>

ದಾಂಡೇಲಿಯ ನಗರಸಭೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ದಾಂಡೇಲಿ ಎಸಿಎಫ್ ಸಂತೋಷ ಚೌಹಾಣ್ ಪರಿಸರ ಜಾಗೃತಿಗಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

   

ದಾಂಡೇಲಿ: ಪರಿಸರ ಸಂರಕ್ಷಣೆ ಅರಣ್ಯ ಇಲಾಖೆ ಕೆಲಸ ಮಾತ್ರವಲ್ಲ, ಅದು ಎಲ್ಲರ ಕರ್ತವ್ಯವಾಗಿದೆ. ಮುಂದಿನ ಪೀಳಿಗೆಗೆ ಶುದ್ಧ ಪರಿಸರವನ್ನು ಉಳಿಸಿ ,ಬೆಳೆಸುವ ಕೆಲಸ ಈಗಿನಿಂದಲೇ ಆಗಬೇಕು. ಗಿಡ ನೆಟ್ಟು ಪರಿಸರ ದಿನಾಚರಣೆ ಮಾಡಿದರೆ ಏನು ಪ್ರಯೋಜನವಿಲ್ಲ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ನಗರದ ದಂಡಕಾರಣ್ಯ ಉದ್ಯಾನವನದಲ್ಲಿ ನಗರಸಭೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ADVERTISEMENT

ಪರಿಸರ ಸಂರಕ್ಷಣೆ ನಿತ್ಯ ನಡೆಯುವ ಕೆಲಸ. ಕಾಡಿನ ಪ್ರದೇಶದಲ್ಲಿ ಇರುವ ನಾವುಗಳು ವನ್ಯಜೀವಿಗಳೊಂದಿಗೆ ನಿತ್ಯವೂ ಸಂಘರ್ಷ ಇದ್ದೇ ಇರುತ್ತದೆ. ಪರಿಸರದೊಂದಿಗೆ ಹೊಂದಿಕೊಂಡು ಬದುಕಬೇಕು. ನಾವು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಸಬೇಕು. ಪ್ರತಿಯೊಬ್ಬರು ವರ್ಷಕ್ಕೆ ಒಂದು ಗಿಡ ನೆಟ್ಟು ಪಾಲಿಸಿ ಪೋಷಿಸಿ ಜಾಗತಿಕ ತಾಪಮಾನದ ತಡೆಗಟ್ಟುವಲ್ಲಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಪೌರಾಯುಕ್ತ ವಿವೇಕ ಬನ್ನೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಅಗತ್ಯ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಶಾಲಾ ಕಾಲೇಜು, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲರ ಸಹಕಾರದಿಂದ ಈ ಪರಿಸರ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.

ದಾಂಡೇಲಿಯ ಎಸಿಎಫ್ ಸಂತೋಷ ಚೌಹಾಣ್ ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಮುಕ್ತ ಪರಿಸರ ಜಾಗೃತಿ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ತಹಶೀಲ್ದಾರ ಶೈಲೇಶ ಪರಮಾನಂದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಆಧಿಕಾರಿ ಟಿ.ಸಿ.ಹಾದಿಮನಿ, ನಗರಸಭೆಯ ಅಧ್ಯಕ್ಷ ಅಶ್ಫಾಕ್ ಶೇಖ, ಉಪಾಧ್ಯಕ್ಷೆ ಶಿಲ್ಪಾ ಕೊಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ ಜಾಧವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಜೈನ್ ಹಾಗೂ ಕಂದಾಯ ಇಲಾಖೆ, ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ನಗರದ 31 ವಾರ್ಡಗಳಲ್ಲಿ ನಗರಸಭೆ ಸದಸ್ಯರಿಂದ ಸ್ವಚ್ಛತಾ ಶ್ರಮದಾನ ಹಾಗೂ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ನಗರಸಭೆಯಿಂದ ದಂಡಕಾರಣ್ಯ ಉದ್ಯಾನವನದ ತನಕ ಪರಿಸರ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಕಾಲೇಜು ಮಕ್ಕಳು, ಶಿಕ್ಷಕರು, ಅರಣ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಪಕ್ಷಗಳ ಮುಖಂಡರು, ನಗರಸಭೆಯ ಸದಸ್ಯರು, ಸ್ಥಳೀಯರು ಪಾಲ್ಗೊಂಡಿದ್ದರು.

ಐಪಿಎಲ್ ಸಂಭ್ರಮಾಚರಣೆ ದುರಂತದಲ್ಲಿ ಮಡಿದವರಿಗೆ ಶಾಸಕ ಆರ್.ವಿ.ದೇಶಪಾಂಡೆ ಸೇರಿದಂತೆ ಎಲ್ಲ ಅಧಿಕಾರಿಗಳು ಮೌನಾಚರಣೆ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.