ADVERTISEMENT

ಅಂಕೋಲಾ: ಹೆದ್ದಾರಿಯಲ್ಲಿ ಉರುಳಿ ಮರ

​ಪ್ರಜಾವಾಣಿ ವಾರ್ತೆ
Published 23 ಮೇ 2025, 12:48 IST
Last Updated 23 ಮೇ 2025, 12:48 IST
ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾದಿಂದ ಹಿಲ್ಲೂರು ಮಾರ್ಗವಾಗಿ ಮಾದನಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ಉರುಳಿದೆ
ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾದಿಂದ ಹಿಲ್ಲೂರು ಮಾರ್ಗವಾಗಿ ಮಾದನಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ಉರುಳಿದೆ   

ಅಂಕೋಲಾ: ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಹಿಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರವೊಂದು ಬಿದ್ದಿದ್ದು, ಸಂಚಾರ ವ್ಯತ್ಯಯವಾಗಿದೆ.

ಮಾಸ್ತಿಕಟ್ಟಾದಿಂದ ಮಾದನಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಮರ ಉರುಳಿ ಸಂಪೂರ್ಣ ಸಂಚಾರ ಬಂದ್ ಆಗಿದ್ದು, ಭಾರಿ ವಾಹನಗಳು ತೆರಳದಂತೆ ಸೂಚನೆ ನೀಡಲಾಗಿದೆ.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ. ಸ್ಥಳಕ್ಕೆ ಭೇಟಿ ನೀಡಿ, ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಶುಕ್ರವಾರವೂ ಮಳೆ ಮುಂದುವರಿದಿದ್ದು, ಕೆಲವೆಡೆ ಗಾಳಿ ಸಹಿತ ಮಳೆಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾದಿಂದ ಹಿಲ್ಲೂರು ಮಾರ್ಗವಾಗಿ ಮಾದನಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ಉರುಳಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.