
ಪ್ರಜಾವಾಣಿ ವಾರ್ತೆ
ಕಾರವಾರ: ಇಲ್ಲಿನ ಗ್ರೀನ್‌ಸ್ಟ್ರೀಟ್‌ನಲ್ಲಿರುವ ಐಸ್‌ಕ್ರೀಮ್ ಪಾರ್ಲರ್‌ನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ರೂಪಾಯಿ ಮೌಲ್ಯದ ಸಾಮಗ್ರಿ ಹಾನಿಗೀಡಾಗಿವೆ.
‘ಹತ್ತಾರು ಗ್ರಾಹಕರು ಐಸ್‌ಕ್ರೀಮ್ ಸವಿಯುತ್ತಿದ್ದ ಸಮಯದಲ್ಲೇ ಅಗ್ನಿ ಅವಘಡ ನಡೆದಿದೆ. ತಕ್ಷಣವೇ ಎಲ್ಲರೂ ಹೊರಗೆ ಓಡಿ ಬಂದಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
‘ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಅವಘಡ ಸಂಭವಿಸಿರುವ ಶಂಕೆ ಇದೆ. ಘಟನೆ ನಡೆದ ಕೆಲವೇ ನಿಮಿಷದಲ್ಲೇ ಬೆಂಕಿ ನಂದಿಸಿದ್ದು, ಕಟ್ಟಡಕ್ಕೆ ಹೆಚ್ಚಿನ ಹಾನಿ ಆಗಿಲ್ಲ. ಆದರೆ, ಪೀಠೋಪಕರಣ, ಸಾಮಗ್ರಿಗಳು ಸುಟ್ಟು ಹೋಗಿವೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.