ADVERTISEMENT

ಶಿರಸಿಯಲ್ಲಿ ಅಗ್ನಿ ಅವಘಡ: ಕಟ್ಟಡದಿಂದ ಜಿಗಿದು ಜೀವ ಉಳಿಸಿಕೊಂಡ ಯುವತಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 7:15 IST
Last Updated 24 ಫೆಬ್ರುವರಿ 2022, 7:15 IST
ಘಟನಾ ಸ್ಥಳಕ್ಕೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲಿಸಿದರು.
ಘಟನಾ ಸ್ಥಳಕ್ಕೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲಿಸಿದರು.   

ಶಿರಸಿ: ಇಲ್ಲಿನ ನಟರಾಜ ರಸ್ತೆಯ ಎರಡು ಅಂಗಡಿಗಳಿಗೆ ಗುರುವಾರ ನಸುಕಿನ ಜಾವ ಬೆಂಕಿ ತಗುಲಿದ್ದು, ಈ ವೇಳೆ ಮಳಿಗೆಯ ಮೇಲಿನ ಮನೆಯಲ್ಲಿದ್ದ ಯುವತಿ ಹೊರಕ್ಕೆ ಜಿಗಿದು ಜೀವ ಉಳಿಸಿಕೊಂಡಿದ್ದಾರೆ.

ಮೇಘನಾ ಮಡಿವಾಳ ಪ್ರಾಣಾಪಾಯದಿಂದ ಪಾರಾದ ಯುವತಿ. ಈಕೆಯ ತಾಯಿ ಭಾರತಿ ಮಡಿವಾಳ ಅವರು ಕೂಡ ಕಟ್ಟಡದಿಂದ ಜಿಗಿದಿದ್ದು, ಈ ವೇಳೆ ಸ್ಥಳೀಯರು ಅವರನ್ನು ಚಾದರ ಬಳಸಿ ಹಿಡಿದಿದ್ದಾರೆ.

ನಸುಕಿನ ಜಾವ ಮಳಿಗೆಯಿಂದ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತ್ತು. ಈ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರನ್ನು ರಕ್ಷಿಸುವ ಪ್ರಯತ್ನ ನಡೆಸಲಾಗಿತ್ತು ಎಂದು ಸ್ಥಳೀಯರಾದ ಫಯಾಜ್ ಅಹ್ಮದ್, ರವಿ ತಿಳಿಸಿದ್ದಾರೆ.

ಘಟನೆಯಲ್ಲಿ ಭಾರತಿ ಅವರಿಗೆ ಸೇರಿದ್ದ ಮೇಘನಾ ಟೇಲರ್ ಅಂಗಡಿ, ಪಕ್ಕದಲ್ಲಿರುವ ರಂಗನಾಥ ರಾಯ್ಕರ್ ಅವರಿಗೆ ಸೇರಿದ ಬ್ಯೂಟಿಕ್ ಪರ್ಲ್ ಮಳಿಗೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಉಪಕರಣಗಳು ಸುಟ್ಟು ಹೋಗಿವೆ.

ಸ್ಥಳಕ್ಕೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲಿಸಿದರು. ಹಾನಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಉಪಕರಣಗಳು ಸುಟ್ಟು ಕರಕಲಾಗಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.