ADVERTISEMENT

ಮೀನುಗಾರರಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಕಾರವಾರದ ಹೊಸ ಮೀನು ಮಾರುಕಟ್ಟೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 11:11 IST
Last Updated 24 ಜೂನ್ 2019, 11:11 IST
ಮೀನು ಮಾರಾಟಗಾರ ಮಹಿಳಾ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದರು
ಮೀನು ಮಾರಾಟಗಾರ ಮಹಿಳಾ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದರು   

ಕಾರವಾರ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಮೀನು ಮಾರುಕಟ್ಟೆ ಕಾಮಗಾರಿಯನ್ನು ಶೀಘ್ರವೇ ಮುಕ್ತಾಯಗೊಳಿಸಬೇಕು. ಅಲ್ಲಿ ಮೀನು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಮೀನು ಮಾರಾಟ ಮಹಿಳಾ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದರು.

ಶಾಸಕಿ ರೂಪಾಲಿ ನಾಯ್ಕ, ಮಾಜಿ ಶಾಸಕರಾದ ಕಾಂಗ್ರೆಸ್‌ನಸತೀಶ ಸೈಲ್ ಮತ್ತು ಜೆಡಿಎಸ್‌ನ ಆನಂದ ಅಸ್ನೋಟಿಕರ್ ಕೂಡ ಜೊತೆಯಾದರು.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಿರ್ಮಾಣ ಮಾಡಲಾಗಿರುವ ತಾತ್ಕಾಲಿಕ ಮೀನು ಮಾರುಕಟ್ಟೆಯಲ್ಲಿ ಸೂಕ್ತ ಸೌಕರ್ಯಗಳಿಲ್ಲ. ಬೀಸಿಗೆಯಲ್ಲಿ ಸುಡು ಬಿಸಿಲಿನಲ್ಲಿ, ಈಗ ಮಳೆಗಾಲದಲ್ಲಿ ಮಳೆಯ ನಡುವೆ ಕೊಡೆ ಹಿಡಿದುಕೊಂಡು ಮೀನು ಮಾರಾಟ ಮಾಡುವಂತಾಗಿದೆ ಎಂದು ಮೀನು ಮಾರಾಟಗಾರರು ಅಳಲು ತೋಡಿಕೊಂಡರು.

ADVERTISEMENT

ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿ ಎರಡು ವರ್ಷಗಳೇ ಕಳೆದರೂ ಹೊಸ ಮಾರುಕಟ್ಟೆಯ ನಿರ್ಮಾಣವಾಗಿಲ್ಲ. ಈ ಸಮಸ್ಯೆ ಬಗೆಹರಿಸುವುದಾಗಿ ನಗರಸಭೆ ನೀಡಿದ್ದ ಭರವಸೆಯೂ ಈಡೇರಿಲ್ಲ ಎಂದು ಮೀನುಗಾರರು ನಗರಸಭೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಒಂದೊಮ್ಮೆ ಮಾರುಕಟ್ಟೆಯ ನಿರ್ಮಾಣವಾಗದೇ ಉಳಿದಲ್ಲಿ ಅನಿವಾರ್ಯವಾಗಿ ನಗರ ಪ್ರದೇಶದಲ್ಲೇ ಕುಳಿತು ಮೀನು ಮಾರಾಟ ಮಾಡಲಿದ್ದೇವೆ. ಹೀಗಾಗಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಿಕೊಟ್ಟು ಸಹಕರಿಸಿ’ ಎಂದು ನಗರಸಭೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ಮನವಿ ಸ್ವೀಕರಿಸಿ, ‘ಮೀನು ಮಾರುಕಟ್ಟೆ ಸಂಬಂಧ ಜೂನ್ 27ರಂದು ಹೈಕೋರ್ಟ್‌ನಿಂದ ಆದೇಶ ಬರುವ ನಿರೀಕ್ಷೆ ಇದೆ. ನಂತರ ಸಭೆ ನಡೆಸಿ ಸೂಕ್ತವ್ಯವಸ್ಥೆ ಮಾಡಿಕೊಡಲಾಗುವುದು’ ಎಂದರು.

ಮುಖಂಡರ ವಾಗ್ವಾದ:ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ್ದ ಪ್ರತಿಭಟನಾಕಾರರ ಜೊತೆ ಶಾಸಕಿ ರೂಪಾಲಿ ನಾಯ್ಕ ಮಾತನಾಡುತ್ತ, ಮೀನು ಮಾರುಕಟ್ಟೆ ವಿಷಯದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಸತೀಶ್ ಸೈಲ್ ಆಕ್ಷೇಪ ವ್ಯಕ್ತಪಡಿಸಿದರು. ಇದು ಇಬ್ಬರೂ ಮುಖಂಡರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮೀನುಗಾರರು, ಜಿಲ್ಲಾಧಿಕಾರಿ ಜೊತೆ ಚರ್ಚಿಸಿದರು.

ಮೀನುಗಾರರ ಮುಖಂಡರಾದ ಗಣಪತಿ ಮಾಂಗ್ರೆ, ರಾಜು‌ ತಾಂಡೇಲ, ಚೇತನ ಹರಿಕಂತ್ರ, ಪ್ರವೀಣ ಜಾವ್ಕರ್, ವಿನಾಯಕ ಹರಿಕಂತ್ರ ಹಾಗೂ ನೂರಾರು ಮೀನುಗಾರರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.