ADVERTISEMENT

ಚಳಿಗಾಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆ ನಿರ್ಲಕ್ಷ್ಯ –ರವೀಂದ್ರ ನಾಯ್ಕ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2021, 13:05 IST
Last Updated 25 ಡಿಸೆಂಬರ್ 2021, 13:05 IST
ರವೀಂದ್ರ ನಾಯ್ಕ
ರವೀಂದ್ರ ನಾಯ್ಕ   

ಶಿರಸಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ವಿಶ್ವಾಸವಿತ್ತು. ಆದರೆ ಅದು ಹುಸಿಯಾಯಿತು ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಬೇಸರ ವ್ಯಕ್ತಪಡಿಸಿದ್ದಾರೆ.

‘ಅನಧೀಕೃತ ಅರಣ್ಯವಾಸಿಗಳನ್ನು ತಕ್ಷಣ ಒಕ್ಕಲೆಬ್ಬಿಸಬೇಕು, ಸರಕಾರದ ಯಾವುದೇ ಸೌಲಭ್ಯ, ಸವಲತ್ತುಗಳನ್ನ ನಿರ್ಬಂಧಿಸಬೇಕು ಎಂದು ಕೆಲ ತಿಂಗಳ ಹಿಂದೆ ಸುಪ್ರಿಂ ಕೋರ್ಟ್ ನಲ್ಲಿ ಪರಿಸರವಾದಿಗಳು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ರಾಜ್ಯ ಸರ್ಕಾರ ಧಿವೇಶನದಲ್ಲಿ ಚರ್ಚಿಸಿ ಅರಣ್ಯವಾಸಿಗಳ ಪರ ಪ್ರಮಾಣಪತ್ರ ಸಲ್ಲಿಸಲು ನಿರ್ಣಯಿಸಬೇಕಿತ್ತು’ ಎಂದು ಅವರು ಹೇಳಿದ್ದಾರೆ.

‘ಅರಣ್ಯವಾಸಿಗಳ ಮೇಲೆ ನಡೆಯುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯ, ಅರಣ್ಯ ಹಕ್ಕು ಕಾಯ್ದೆಯ ಅಸಮರ್ಪಕ ಅನುಷ್ಠಾನದ ಬಗ್ಗೆ ಸದನದಲ್ಲಿ ಯಾವೊಬ್ಬ ಜನಪ್ರತಿನಿಧಿಯೂ ಮಾತನಾಡಿಲ್ಲ. ಇದು ಅರಣ್ಯವಾಸಿಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂಬುದನ್ನು ಸ್ಪಷ್ಟಪಡಿಸಿದಂತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.