ADVERTISEMENT

ಕಾರವಾರ: ಅರಣ್ಯ ಭೂಮಿ ಹಕ್ಕು ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 19:57 IST
Last Updated 6 ಡಿಸೆಂಬರ್ 2025, 19:57 IST
ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ಒದಗಿಸುವ ಸಂಬಂಧ ಉನ್ನತಮಟ್ಟದ ಸಭೆ ನಡೆಸಲು ನಿರ್ಧರಿಸಬೇಕು ಎಂದು ಒತ್ತಾಯಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ಕಾರವಾರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ಒದಗಿಸುವ ಸಂಬಂಧ ಉನ್ನತಮಟ್ಟದ ಸಭೆ ನಡೆಸಲು ನಿರ್ಧರಿಸಬೇಕು ಎಂದು ಒತ್ತಾಯಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ಕಾರವಾರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.   

ಕಾರವಾರ: ‘ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ಒದಗಿಸಲು ಉನ್ನತಮಟ್ಟದ ಸಭೆ ನಡೆಸಲು ಸರ್ಕಾರ ನಿರ್ಧರಿಸಬೇಕು’ ಎಂದು ಒತ್ತಾಯಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಶನಿವಾರ ಸಮಾವೇಶ ನಡೆಯಿತು.

‘ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಈ ಕುರಿತು ಚರ್ಚೆಯಾಗಬೇಕು’ ಎಂದು ಆಗ್ರಹಿಸಲಾಯಿತು. 

ಸಾವಿರಾರು ಜನರು ನಗರದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಬುಡಕಟ್ಟು ಸಮುದಾಯಗಳ ಜನರು, ಅರಣ್ಯವಾಸಿಗಳು ಪಾಲ್ಗೊಂಡಿದ್ದರು. ಇಲ್ಲಿನ ಮಾಲಾದೇವಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ 6 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.

ADVERTISEMENT

ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿ, ‘ಗದಗನಲ್ಲಿ ಎಚ್.ಕೆ.ಪಾಟೀಲ, ಉತ್ತರ ಕನ್ನಡದಲ್ಲಿ ಆರ್.ವಿ.ದೇಶಪಾಂಡೆ ಈ ಹಿಂದೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಕೆಲ ಕುಟುಂಬಗಳಿಗೆ ಹಕ್ಕುಪತ್ರ ಕೊಡಿಸಿದ್ದರು. ಅದೇ ಮಾದರಿ ಅನುಸರಿಸಿ ಹಕ್ಕುಪತ್ರ ಒದಗಿಸಲು ಸರ್ಕಾರ ನಿರ್ಣಯಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.