
ಪ್ರಜಾವಾಣಿ ವಾರ್ತೆ
ಜೈಲು (ಪ್ರಾತಿನಿಧಿಕ ಚಿತ್ರ)
ಮುಂಡಗೋಡ: ಉಪವಲಯ ಅರಣ್ಯಾಧಿಕಾರಿ ಯಲ್ಲಾನಾಯಕ ಹಮಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಾಲ್ಲೂಕಿನ ಅಜ್ಜಳ್ಳಿ ಗ್ರಾಮದ ಚಂದ್ರಶೇಖರ ಹರಿಜನ ಅವರಿಗೆ ಮೂರು ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ, ಜೆಎಂಎಫ್‌ಸಿ ನ್ಯಾಯಾಧೀಶೆ ಅಕ್ಷತಾ ಸಿ.ಆರ್. ಶನಿವಾರ ಆದೇಶ ನೀಡಿದ್ದಾರೆ.
ತನ್ನ ಅಣ್ಣನ ಮೇಲೆ ಅರಣ್ಯ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆಂದು ಕುಪಿತಗೊಂಡ ಚಂದ್ರಶೇಖರ ಅವರು ಯಲ್ಲಾನಾಯಕ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು 2019ರಲ್ಲಿ ಪ್ರಕರಣ ದಾಖಲಾಗಿತ್ತು. ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರಸಾದ ರಮೇಶ ಹೆಗಡೆ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.