ADVERTISEMENT

ಲಕ್ಷಾಂತರ ರೂಪಾಯಿ ಮೌಲ್ಯದ ಸಾಗವಾನಿ ನಾಟಾ ವಶ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 15:49 IST
Last Updated 11 ಆಗಸ್ಟ್ 2022, 15:49 IST
ಅಂಕೋಲಾದ ಅಗ್ರಗೋಣದಲ್ಲಿ ಅನಧಿಕೃತವಾಗಿ ದಾಸ್ತಾನು ಇಡಲಾಗಿದ್ದ ಸಾಗವಾನಿ ನಾಟಾಗಳು
ಅಂಕೋಲಾದ ಅಗ್ರಗೋಣದಲ್ಲಿ ಅನಧಿಕೃತವಾಗಿ ದಾಸ್ತಾನು ಇಡಲಾಗಿದ್ದ ಸಾಗವಾನಿ ನಾಟಾಗಳು   

ಅಂಕೋಲಾ: ತಾಲ್ಲೂಕಿನ ಅಗ್ರಗೋಣದ ಜಾನಕಿ ವುಡ್ ಇಂಡಸ್ಟ್ರೀಸ್‌ನಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಗವಾನಿ ಕಟ್ಟಿಗೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ.

ನಾಟಾಗಳನ್ನು ಪೀಠೋಪಕರಣ ಮಾಡುವ ಉದ್ದೇಶದಿಂದ ದಾಸ್ತಾನು ಇಡಲಾಗಿತ್ತು. ಆದರೆ, ದಾಖಲೆಗಳು ಇರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ಈ ಸಂಬಂಧ ಶಂಕರ ರಾಮ ವೆರ್ಣೇಕರ್ ಮತ್ತು ರಾಮರಾಜ ಶಂಕರ ವೆರ್ಣೇಕರ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ ನಾಯ್ಕ ಮೊರಳ್ಳಿಯನ್ನು ವಿಚಾರಣೆಗೊಳಪಡಿಸಿ ವಲಯ ಅಧಿಕಾರಿಗಳ ಮುಂದೆ ಹಾಜರುಪಡಿಸಲಾಗಿದೆ. ತಾತ್ಕಾಲಿಕವಾಗಿ ಘಟಕಕ್ಕೆ ಬೀಗಮುದ್ರೆ ಹಾಕಲಾಗಿದೆ.

ಕಾರವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕೆ.ಸಿ ಮಾರ್ಗದರ್ಶನದಲ್ಲಿ, ಅಂಕೋಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣ ಗೌಡ ಮತ್ತು ಹೊಸಕಂಬಿ ವಲಯ ಅರಣ್ಯ ಅಧಿಕಾರಿ ಸುರೇಶ ನಾಯ್ಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಉಪವಲಯ ಅರಣ್ಯ ಅಧಿಕಾರಿಗಳಾದ ರಾಘವೇಂದ್ರ ಜೀರಗಾಳೆ, ಸತೀಶ ಕಾಂಬಳೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.