ಶಿರಸಿ (ಉತ್ತರ ಕನ್ನಡ ಜಿಲ್ಲೆ): ’ಅರಣ್ಯ ಹಕ್ಕು ಕಾಯಿದೆಯಡಿ ಸಲ್ಲಿಸಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸದೇ ರಾಜ್ಯದಲ್ಲಿ 2.60 ಲಕ್ಷಕ್ಕೂ ಮಿಕ್ಕಿ ಅರ್ಜಿ ತಿರಸ್ಕರಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ತೀರ್ಮಾನಿಸಿದೆ‘ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
‘ಶನಿವಾರ ನಗರದಲ್ಲಿ ನಡೆದ ಚಿಂತನ ಕೂಟದಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು’ ಎಂದರು.
‘ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸಚಿವರು ಕರ್ನಾಟಕದಲ್ಲಿ ಅರ್ಜಿ ತಿರಸ್ಕರಿಸಿದ ಉತ್ತರದ ಪ್ರತಿ ನೀಡಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಅರಣ್ಯ ವಾಸಿಗಳ ಪರ ಇದ್ದಾಗಲೂ, ಭೂಮಿ ಹಕ್ಕಿನಿಂದ ವಂಚಿತರಾಗುವಂತಾಗಿದ್ದು ಖಂಡನೀಯ. ಇದರ ವಿರುದ್ಧ ಹೋರಾಟಗಾರರ ವೇದಿಕೆ ಹೋರಾಟ ಮುಂದುವರೆಸಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.