ADVERTISEMENT

ಕುಮಟಾ– ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ ನಿಧನ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 15:34 IST
Last Updated 18 ಅಕ್ಟೋಬರ್ 2021, 15:34 IST
ಡಾ.ಎಂ.ಪಿ.ಕರ್ಕಿ
ಡಾ.ಎಂ.ಪಿ.ಕರ್ಕಿ   

ಹೊನ್ನಾವರ (ಉತ್ತರ ಕನ್ನಡ): ಕುಮಟಾ– ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ (86) ಅವರು ಪಟ್ಟಣದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.

ಅವರು 1983 ಹಾಗೂ 1994ರಲ್ಲಿ ಎರಡು ಸಲ ಶಾಸಕರಾಗಿದ್ದರು. ಒಂದು ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿ.ಜೆ.ಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಹೊನ್ನಾವರದ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಉತ್ತರ ಕನ್ನಡದಲ್ಲಿ ಬಿ.ಜೆ.ಪಿ ಸಂಘಟನೆಗೆ ಅವರು ಅಪಾರ ಶ್ರಮಿಸಿದ್ದರು.

ADVERTISEMENT

ಅಂತ್ಯಕ್ರಿಯೆಯು ಮಂಗಳವಾರ ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.