ಅಮಾನತು
ಕಾರವಾರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳೇ ನಿಜಗಲ್ ಬಳಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಭದ್ರತಾ ಸಿಬ್ಬಂದಿ (ಗನ್ ಮ್ಯಾನ್) ಶ್ರೀಧರ ತೆಗ್ಗಿನ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಆದೇಶಿಸಿದ್ದಾರೆ.
'ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಆಗಿರುವ ಶ್ರೀಧರ್ ವಿರುದ್ಧ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ' ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.