ದಾಂಡೇಲಿ: ನಗರದ ಟೌನ್ ಶಿಪ್‌ನಲ್ಲಿರುವ ಮಹಾಗಣಪತಿ ದೇವಸ್ಥಾನದಲ್ಲಿ 37ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಗುರುವಾರ ಸಂಭ್ರಮದಿಂದ ನಡೆಯಿತು.
ಬೆಳಗ್ಗೆಯಿಂದಲೇ ಸ್ವಾಮಿ ಸನ್ನಿಧಿಯಲ್ಲಿ ಸತ್ಯ ಗಣಪತಿ ವ್ರತ, ಸತ್ಯನಾರಾಯಣ ವ್ರತ ನಡೆಯಿತು. ದೇವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನಡೆದವು.
ಬಳಿಕ ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನ ಪ್ರಸಾದ ವಿತರಣೆ ನಡೆಯಿತು. ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು. ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಅರ್ಚಕ ವೃಂದ ಹಾಗೂ ಸ್ಥಳೀಯ ಭಕ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.