ADVERTISEMENT

ಸ್ವಾತಂತ್ರ್ಯದ ಅಮೃತಮಹೋತ್ಸವ: ಫ್ರೀಡಂ ರನ್ ಆಯೋಜನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 14:29 IST
Last Updated 25 ಸೆಪ್ಟೆಂಬರ್ 2021, 14:29 IST
ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾರವಾರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಓಟಕ್ಕೆ ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಯಶವಂತ ಯಾದವ್ ಹಸಿರು ನಿಶಾನೆ ತೋರಿದರು
ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾರವಾರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಓಟಕ್ಕೆ ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಯಶವಂತ ಯಾದವ್ ಹಸಿರು ನಿಶಾನೆ ತೋರಿದರು   

ಕಾರವಾರ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನದ ಅಂಗವಾಗಿ ನಗರದಲ್ಲಿ ಶನಿವಾರ ‘ಫ್ರೀಡಂ ರನ್’ ಆಯೋಜಿಸಲಾಯಿತು.

ಜಿಲ್ಲಾಡಳಿತ, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ, ಎನ್.ಸಿ.ಸಿ. ನೇವಲ್ ಮತ್ತು ಆರ್ಮಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 7.30ಕ್ಕೆ ಕಾರ್ಯಕ್ರಮ ಆರಂಭವಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾದ ಓಟವು, ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಸಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಿಂದ ಪುನಃ ಬಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಕ್ತಾಯವಾಯಿತು.

ವಿವಿಧ ಶಾಲಾ ಕಾಲೇಜುಗಳಿಂದ 80 ಎನ್.ಸಿ.ಸಿ. ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಯಶವಂತ ಯಾದವ್, ಜಿಲ್ಲಾ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿಗಾಯತ್ರಿ ಜಿ., ಎನ್.ಸಿ.ಸಿ ಟೀಮ್ ಕಮಾಂಡಿಂಗ್ ಆಫೀಸರ್ ವಿಜಯಕುಮಾರ್, ಸೇಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಎನ್.ಸಿ.ಸಿ ಅಧಿಕಾರಿ ಶೇಖ್ ಶಬಾನಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.