ADVERTISEMENT

ಶಿರಸಿ | ದಿನವಿಡೀ ವಹಿವಾಟಿಗೆ ಅವಕಾಶ: ಸಚಿವ ಶಿವರಾಮ ಹೆಬ್ಬಾರ್

​ಪ್ರಜಾವಾಣಿ ವಾರ್ತೆ
Published 19 ಮೇ 2020, 11:39 IST
Last Updated 19 ಮೇ 2020, 11:39 IST
ಶಿವರಾಮ ಹೆಬ್ಬಾರ್‌
ಶಿವರಾಮ ಹೆಬ್ಬಾರ್‌   

ಶಿರಸಿ: ಭಟ್ಕಳ ಹೊರತುಪಡಿಸಿ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮೇ 20ರಿಂದ ಎಲ್ಲ ಚಟುವಟಿಕೆಗಳಿಗೆ ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಮಂಗಳವಾರ ಇಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಿಸುವ ಸಂಬಂಧ ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ಜಿಲ್ಲೆಯಲ್ಲಿ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟು, ಇನ್ನಿತರ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿತ್ತು. ಬಹುಜನರ ಬೇಡಿಕೆ ಹಾಗೂ ಜನರ ಆರ್ಥಿಕ ಸ್ಥಿತಿ ಸುಧಾರಣೆ ಹಿನ್ನೆಲೆಯಲ್ಲಿ ಮೇ 20ರಿಂದ ಸಂಜೆ 6 ಗಂಟೆವರೆಗೂ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಲಾಗುವುದು ಎಂದರು.

ಅಂಗಡಿಕಾರರು, ವ್ಯಾಪಾರಿಗಳು, ಗ್ರಾಹಕರು ವ್ಯಕ್ತಿಗತ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಇದನ್ನು ಮರೆತು ವ್ಯವಹಾರ ನಡೆಸಿದರೆ ಅಂತಹವರ ಅಂಗಡಿ ಲೈಸೆನ್ಸ್ ರದ್ದುಪಡಿಸಲಾಗುವುದು. ರಾಜ್ಯದ ಒಳಗಡೆ ಅಂತರ ಜಿಲ್ಲೆಗಳಿಂದ ಬರುವವರಿಗೆ ಹೋಂ ಕ್ವಾರಂಟೈನ್ ಕಡ್ಡಾಯವಾಗಿರುತ್ತದೆ. ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.