ದಾಂಡೇಲಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪೂರ್ಣಾಂಕ ಪಡೆದ ಜಿಲ್ಲೆಯ ಸುಮಾರು 825 ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸುವ ಸರಣಿ ಕಾರ್ಯಕ್ರಮ ಜಿಲ್ಲೆಯಾದ್ಯಂತ ತಾಲ್ಲೂಕುವಾರು ಜೂನ್ 25ರಿಂದ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದ್ದಾರೆ.
‘2022ರಲ್ಲಿ ಈ ಕಾರ್ಯಕ್ರಮ ಪ್ರಾರಂಭವಾಗಿದೆ. ಕನ್ನಡ ಭಾಷಾ ವಿಷಯದಲ್ಲಿ ಸಾಧನೆ ಮಾಡಿದವರನ್ನು ಉತ್ತೇಜಿಸಬೇಕು ಎಂಬುದು ಈ ಕಾರ್ಯಕ್ರಮದ ಆಶಯ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಜುಲೈ 3ರಂದು ಬೆಳಿಗ್ಗೆ 10.30ಕ್ಕೆ ದಾಂಡೇಲಿಯ ಜನತಾ ವಿದ್ಯಾಲಯದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಗೌರವ ಸ್ವೀಕರಿಸುವಂತೆ ಹಾಗೂ ಸಾರ್ವಜನಿಕರು, ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.