ಬಂಧನ
(ಪ್ರಾತಿನಿಧಿಕ ಚಿತ್ರ)
ಹೊನ್ನಾವರ: ಕರ್ಕಿ ಕಂಫರ್ಟ್ ಹೋಟೆಲ್‌ನ ಎರಡನೇ ಮಹಡಿಯ ಕೊಠಡಿಯೊಂದರಲ್ಲಿ ಭಾನುವಾರ ಜೂಜಾಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಸಿಪಿಐ ಸಿದ್ಧರಾಮೇಶ್ವರ ಎಸ್.ನೇತೃತ್ವದ ಪೊಲೀಸ್ ತಂಡ ಒಟ್ಟು 6 ಆರೋಪಿಗಳನ್ನು ಬಂಧಿಸಿದೆ.
ಘಟನಾ ಸ್ಥಳದಲ್ಲಿದ್ದ ₹20,910 ನಗದು,ಇಸ್ಪೀಟ್ ಪರಿಕರಗಳು, ವಾಹನ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂಜಾಟಕ್ಕೆ ಸಹಕರಿಸಿದ ಇತರ ಇಬ್ಬರು ಆರೋಪಿಗಳ ವಿರುದ್ಧವೂ ದೂರು ದಾಖಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.