ADVERTISEMENT

ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ: ವಾಹನ ಸಂಚಾರಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 8:34 IST
Last Updated 10 ಆಗಸ್ಟ್ 2022, 8:34 IST
ಗೇರುಸೊಪ್ಪ ವೃತ್ತದ ಬಳಿ ಪಲ್ಟಿಯಾಗಿರುವ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್.
ಗೇರುಸೊಪ್ಪ ವೃತ್ತದ ಬಳಿ ಪಲ್ಟಿಯಾಗಿರುವ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್.   

ಕಾರವಾರ: ಹೊನ್ನಾವರ ಪಟ್ಟಣದ ಗೇರುಸೊಪ್ಪ ವೃತ್ತದ ಬಳಿ ಬುಧವಾರ, ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದೆ . ಮುನ್ನೆಚ್ಚರಿಕೆ ಕ್ರಮವಾಗಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಮಂಗಳೂರಿನಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಟ್ಯಾಂಕರ್, ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಕಾರಣ, ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಭಾರಿ ವಾಹನಗಳ ಸಂಚಾರವನ್ನು ಸ್ಥಗಿತ ಮಾಡಲಾಗಿದ್ದು, ಲಘು ವಾಹನಗಳನ್ನು ಪಟ್ಟಣದ ಒಳಭಾಗದಿಂದ ಸಂಚರಿಸಲು ಅನುವು ಮಾಡಲಾಗಿದೆ.

ಅಗ್ನಿ ಶಾಮಕದಳ ಮತ್ತು ಪೊಲೀಸ್ ಸಿಬ್ಬಂದಿ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.