ADVERTISEMENT

ಕೈಕೊಟ್ಟ ಆಂಬ್ಯುಲೆನ್ಸ್: ಆಟೋದಲ್ಲೆ ಮಗುವಿಗೆ ಜನ್ಮ ನೀಡಿದ ಮಹಿಳೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2020, 14:31 IST
Last Updated 25 ಏಪ್ರಿಲ್ 2020, 14:31 IST
   

ಭಟ್ಕಳ: ಆಂಬ್ಯುಲೆನ್ಸ್ ಕೈಕೊಟ್ಟಿದ್ದರಿಂದ ಆಟೊರಿಕ್ಷಾದಲ್ಲಿ ಆಸ್ಪತ್ರೆಗೆ ತೆರಳಿದ ಗರ್ಭಿಣಿ ಮಹಿಳೆಯೊಬ್ಬರು, ಶುಕ್ರವಾರ ಆಸ್ಪತ್ರೆಯ ಆವರಣ ತಲುಪುವ ವೇಳೆ, ಆಟೊರಿಕ್ಷಾದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಾಮಿಯಾಬಾದ್ ರಜ್ಮಿಯಾ ಎಂಬ ಮಹಿಳೆಗೆ ಶುಕ್ರವಾರ ಮಧ್ಯಾಹ್ನದ ವೇಳೆ ಹೆರಿಗೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರ ಪತಿ 108 ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಮೂರು ತಾಸು ಕಳೆದರೂ ಆಂಬ್ಯುಲೆನ್ಸ್ ಬರಲಿಲ್ಲ. ಇದೇ ವೇಳೆ ಮಹಿಳೆಗೆ ನೋವು ಹೆಚ್ಚಾಗಿದ್ದರಿಂದ, ಆಟೊರಿಕ್ಷಾದಲ್ಲಿ ಶಿರಾಲಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಆದರೆ, ಮಹಿಳೆ ಆಸ್ಪತ್ರೆಗೆ ದಾಖಲಾಗುವುದರೊಳಗೆ ಆಸ್ಪತ್ರೆಯ ಆವರಣದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಗೆ ಇದು ಮೂರನೇ ಹೆರಿಗೆಯಾಗಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. 108 ಆಂಬ್ಯುಲೆನ್ಸ್ ಅನ್ನು ಕೊರೊನಾ ಸೋಂಕಿತರ ಸಾಗಾಟಕ್ಕೆ ಬಳಸುತ್ತಿರುವುದರಿಂದ ಆಂಬ್ಯುಲೆನ್ಸ್ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.