ಸಾವು (ಪ್ರಾತಿನಿಧಿಕ ಚಿತ್ರ)
ಮುಂಡಗೋಡ (ಉತ್ತರ ಕನ್ನಡ ಜಿಲ್ಲೆ): ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದ ಐದು ವರ್ಷದ ಬಾಲಕಿ ಮಯೂರಿ ಸುರೇಶ ಕುಂಬಳೆಪ್ಪನವರ ಹಾವು ಕಡಿತ ದಿಂದ ಮಂಗಳವಾರ ಮೃತಪಟ್ಟಿದ್ದಾಳೆ.
‘ಮೂತ್ರ ವಿಸರ್ಜನೆಗೆಂದು ಅಂಗನವಾಡಿ ಕೇಂದ್ರದ ಹಿಂಬದಿ ತೆರಳಿದಾಗ, ಮಯೂರಿಗೆ ಹಾವು ಕಡಿದಿದೆ. ರಕ್ತಸ್ರಾವ ಆಗುತ್ತಿದ್ದನ್ನು ಕಂಡ ಅಂಗನವಾಡಿ ಸಿಬ್ಬಂದಿ, ಆಕೆಯನ್ನು ಕೂಡಲೇ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಗೆ ಕರೆದೊಯ್ಯು ವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.