
ಪ್ರಜಾವಾಣಿ ವಾರ್ತೆ(ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಕಾರವಾರ: ತಾಲ್ಲೂಕಿನ ನಗೆಕೋವೆ ಗ್ರಾಮದಲ್ಲಿ ಭಾನುವಾರ ಇಟ್ಟಂಗಿ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬಾಲಕಿ ಮೃತಪಟ್ಟಿದ್ದಾಳೆ.
ದ್ರಾಕ್ಷಾಯಣಿ ಗೌಡ (15) ಮೃತೆ. ಈಕೆ ತನ್ನ ತಾಯಿಯೊಂದಿಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಯು ಡಿಕ್ಕಿಯಾಗಿದೆ. ತೀವೃ ಗಾಯಗಯೊಂಡಿದ್ದ ಆಕೆಯನ್ನು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾಗಿ ಮಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
‘ನಿರ್ಲಕ್ಷತನದ ಚಾಲನೆಯಿಂದ ಬಾಲಕಿಯ ಸಾವಿಗೆ ಕಾರಣನಾದ ಆರೋಪದಡಿ ಚಾಲಕ ಕೆರವಡಿಯ ಕಿರಣ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.