ಗೋಕರ್ಣ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುಗಳ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ, ಆರೋಪಿಯನ್ನು ಭಾನುವಾರ ಸಂಜೆ ಪೊಲೀಸರು ವಶಕ್ಕೆ ಪಡೆದು ಕ್ರಮ ಜರುಗಿಸಿದ್ದಾರೆ.
ಬಂಕಿಕೊಡ್ಲ ಸಮೀಪದ ಹನೇಹಳ್ಳಿಯ ನಿವಾಸಿ, ವಿಠ್ಠಲ ನಾಗೇಶ ಗೌಡ (35) ಆರೋಪಿ.
ಇಲ್ಲಿಯ ಬಂಗ್ಲೆಗುಡ್ಡದ ಸಮೀಪದ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಮಾದಕ ಪದಾರ್ಥ ಗಾಂಜಾ ಸೇವಿಸಿ, ಅಮಲಿನಲ್ಲಿ ಅಲೆದಾಡುತ್ತಿರುವಾಗ, ಪೊಲೀಸ್ ಉಪನಿರೀಕ್ಷಕ ಖಾದರ ಭಾಷ ನೇತೃತ್ವದ ಪೊಲೀಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಸಂಶಯ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ದೃಢ ಪಟ್ಟಿದೆ ಎಂದು ತಿಳಿಸಿದ್ದಾರೆ.
ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.