
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಗೋಕರ್ಣ: ಇಲ್ಲಿಯ ಮೇನ್ ಬೀಚಿನಲ್ಲಿ ಗುರುವಾರ ತಮಿಳುನಾಡಿನ ಕೊಯಿಮುತ್ತೂರಿನ ನಿವಾಸಿ ಆರ್. ಕುಮಾರ್ (62) ಎಂಬುವವರು ಸಮುದ್ರದ ಅಲೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.
ಕೂಡಲೇ ಜೀವರಕ್ಷಕರು ದಡಕ್ಕೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಹುತೇಕ ಹೃದಯಾಘಾತದಿಂದ ಮೃತ ಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮೃತರ ಶವವನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂಬಂಧಿಕರು ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.