
ಪ್ರಜಾವಾಣಿ ವಾರ್ತೆ
ಗೋಕರ್ಣ: ಇಲ್ಲಿಯ ಓಂ ಬೀಚ್‌ನ ಸಮುದ್ರದಲ್ಲಿ ಮುಳುಗುತ್ತಿದ್ದ ಸಾಗರ ಮೂಲದ ವರುಣ ಸಾಗರ (23) ಎಂಬುವರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.
ಸಾಗರದಿಂದ ಗೋಕರ್ಣಕ್ಕೆ ಮೂವರೊಂದಿಗೆ ಪ್ರವಾಸಕ್ಕಾಗಿ ಬಂದಿದ್ದ ವರುಣ ಸಾಗರ, ಸಮುದ್ರ ತೀರದಲ್ಲಿ ಈಜಾಡುತ್ತಿದ್ದಾಗ ಅಲೆಯ ಸಿಲುಕಿ ಮುಳುಗುತ್ತಿದ್ದರು. ಇದನ್ನು ಗಮನಿಸಿದ ಜೀವ ರಕ್ಷಕ ಸಿಬ್ಬಂದಿ ಮಂಜೇಶ ಹರಿಕಂತ್ರ, ಪ್ರಭಾಕರ ಅಂಬಿಗ ಅವರು ರಕ್ಷಿಸಿದ್ದಾರೆ.
ವರುಣ್ ಸಾಗರ ಅವರಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಪಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.