ADVERTISEMENT

ದೂರದೃಷ್ಟಿಯುಳ್ಳ ಪತ್ರಕರ್ತ ಸಮಾಜದ ಆಸ್ತಿ: ವಿಶ್ವೇಶ್ವರ ಹೆಗಡೆ ಕಾಗೇರಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 13:11 IST
Last Updated 13 ಅಕ್ಟೋಬರ್ 2021, 13:11 IST
ಶಿರಸಿಯ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿರೂಪಾಕ್ಷ ಹೆಗಡೆ ಕಂಚಿಕೈ ಅವರಿಗೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ‘ಮಾಧ್ಯಮಶ್ರೀ ಪ್ರಶಸ್ತಿ’ ಪ್ರದಾನ ಮಾಡಿದರು. ಕೆಎಂಎಫ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ ಇತರರು ಇದ್ದರು. 
ಶಿರಸಿಯ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿರೂಪಾಕ್ಷ ಹೆಗಡೆ ಕಂಚಿಕೈ ಅವರಿಗೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ‘ಮಾಧ್ಯಮಶ್ರೀ ಪ್ರಶಸ್ತಿ’ ಪ್ರದಾನ ಮಾಡಿದರು. ಕೆಎಂಎಫ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ ಇತರರು ಇದ್ದರು.    

ಶಿರಸಿ: ‘ಸಕಾರಾತ್ಮಕ ದೂರದೃಷ್ಟಿಯೊಂದಿಗೆ ಕೆಲಸ ಮಾಡುವ ಪತ್ರಕರ್ತರು ಸಮಾಜದ ಆಸ್ತಿ’ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಶಿರಸಿ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ ‘ಮಾಧ್ಯಮಶ್ರೀ ಪ್ರಶಸ್ತಿ’ಯನ್ನು ಇಲ್ಲಿನ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿರೂಪಾಕ್ಷ ಹೆಗಡೆ ಕಂಚಿಕೈ ಅವರಿಗೆ ಪ್ರದಾನ ಮಾಡಿ ಮಾತನಾಡಿದ ಅವರು, ‘ಪತ್ರಕರ್ತರನ್ನು ಸಮಾಜ ಸದಾ ಗಮನಿಸುತ್ತದೆ. ಹೀಗಾಗಿ ಪತ್ರಕರ್ತರು ಮಾದರಿಯಾಗಬೇಕು’ ಎಂದರು.

‘ಸತ್ಯ, ವಸ್ತುನಿಷ್ಠ, ಸಕಾಲಿಕವಾಗಿ ವಿಷಯಗಳನ್ನು ಸಮಾಜದ ಎದುರು ತೆರೆದಿಡುವವರು ಯಶಸ್ವಿ ಪತ್ರಕರ್ತರಾಗುತ್ತಾರೆ’ ಎಂದರು.

ADVERTISEMENT

ಕೆ.ಎಂ.ಎಫ್.ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ‘ಹಣದ ಹಿಂದೆ ಬೀಳದೆ ಸಮಾಧಾನಕ್ಕಾಗಿ ಕೆಲಸ ಮಾಡುವ ಪತ್ರಕರ್ತರು ನಮ್ಮ ನಡುವೆ ಇದ್ದಾರೆ ಎಂಬುದೆ ಹೆಮ್ಮೆ’ ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್, ‘ಪತ್ರಿಕೋದ್ಯಮ ಕ್ಷೇತ್ರಕ್ಕೆ ಉತ್ತರ ಕನ್ನಡದ ಕೊಡುಗೆ ದೊಡ್ಡದಿದೆ’ ಎಂದರು. ‘ಸಮಾಜದಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪತ್ರಕರ್ತರು ಮುಖ್ಯಪಾತ್ರ ವಹಿಸುತ್ತಾರೆ’ ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ವಿರೂಪಾಕ್ಷ ಹೆಗಡೆ ತಮ್ಮ ಪತ್ರಿಕೋದ್ಯಮ ಜೀವನದ ಅನುಭವ ಹಂಚಿಕೊಂಡರು. ಶಿರಸಿ ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಆರ್.ಸಂತೋಷಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂದೇಶ ಭಟ್ ಇದ್ದರು. ಆಶಾ ಕೆರೆಗದ್ದೆ ಪ್ರಾರ್ಥಿಸಿದರು. ಕೃಷ್ಣಮೂರ್ತಿ ಕೆರೆಗದ್ದೆ ಸ್ವಾಗತಿಸಿದರು. ರಾಘವೇಂದ್ರ ಬೆಟ್ಟಕೊಪ್ಪ ಕಾರ್ಯಕ್ರಮ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.