ಶಿರಸಿ: ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಹೊಂದಿದ್ದ ತಾಲ್ಲೂಕಿನಲ್ಲಿ ಸೋಮವಾರ ಸಂಜೆ ಉತ್ತಮ ಮಳೆಯಾಯಿತು.
ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾದ ಕಾರಣ ಭೂಮಿ ತಂಪಾಯಿತು. ನಗರದ ಕೆಲವೆಡೆ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿಯಿತು. ಇದರಿಂದ ಕೆಲ ಕಾಲ ವಾಹನ ಸವಾರರು ಪರದಾಡುವಂತಾಯಿತು.
ಮರಾಠಿಕೊಪ್ಪದಲ್ಲಿ ಹೊಸದಾಗಿ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಮಳೆ ಅಡ್ಡಿಯಾಯಿತು. ಆಗಾಗ ಸುರಿಯುವ ಮಳೆ ಮುಂದುವರಿದಿದ್ದು, ಈವರೆಗಿದ್ದ ಧಗೆಯ ವಾತಾವರಣ ಕಡಿಮೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.