
ವಿಶ್ವೇಶ್ವರ ಹೆಗಡೆ
ಮುಂಡಗೋಡ: ‘ದೇಶದ ಅಭಿವೃದ್ಧಿ ಸಹಿಸಿಕೊಳ್ಳಲು ಆಗದ ದೇಶದ್ರೋಹಿ ಶಕ್ತಿಗಳು ದೆಹಲಿಯಲ್ಲಿ ಬಾಂಬ್ ಸ್ಫೋಟ ಮಾಡಿವೆ. ದೇಶದ್ರೋಹಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಶಕ್ತವಾಗಿದ್ದಾರೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಿಂದ ಬೆಳೆ ಹಾನಿಯಾಗಿದ್ದು, ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಬೆಳೆ ಪರಿಹಾರವನ್ನೂ ಕೊಡುತ್ತಿಲ್ಲ. ಇದು ರಾಜ್ಯದೆಲ್ಲೆಡೆಯ ಸಮಸ್ಯೆಯಾಗಿದೆ’ ಎಂದರು.
‘ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇಬ್ಬರೂ ಅಧಿಕಾರದ ಕಚ್ಚಾಟದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿಯುವಂತೆ ಮಾಡಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿ’ ಎಂದು ಆಗ್ರಹಿಸಿದರು.
‘ಶಾಸಕ ಶಿವರಾಮ ಹೆಬ್ಬಾರ ಅವರ ಮಾತಿಗೂ ಕೃತಿಗೂ ವ್ಯತ್ಯಾಸವಿದೆ. ಮತ್ತೊಬ್ಬರಿಗೆ ಹೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಜನ ಗಣ ಮನವು ಸಂವಿಧಾನಬದ್ಧವಾಗಿ ನಾವು ಸ್ವೀಕರಿಸಿದ ರಾಷ್ಟ್ರಗೀತೆಯಾಗಿದ್ದು, ಅದರ ಕುರಿತು ವಿವಾದ ಮಾಡಬಾರದು. ವಂದೇ ಮಾತರಂಗೆ ಕಾಂಗ್ರೆಸ್ ಪ್ರಾಮುಖ್ಯ ಕೊಡದಿರುವುದು, ಅಧಿವೇಶನದಲ್ಲಿ ಹಾಡುತ್ತಿದ್ದಾಗ ಅರ್ಧಕ್ಕೆ ನಿಲ್ಲಿಸಿದ್ದು ಇದೆಲ್ಲದರ ಕುರಿತು ಚರ್ಚೆ ಆಗಬೇಕಾಗಿದೆ’ ಎಂದು ಹೇಳಿದರು.
ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯ ಅಶೋಕ ಚಲವಾದಿ, ವಿಠ್ಠಲ ಬಾಳಂಬೀಡ, ತುಕಾರಾಮ ಇಂಗಳೆ, ಗುರು ಕಾಮತ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.