ADVERTISEMENT

ಕುಮಟಾ: ಸಮಾನ ವೇತನಕ್ಕೆ ಆಗ್ರಹಿಸಿ ಶಾಸಕ ದಿನಕರ ಶೆಟ್ಟಿ ಅವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 8:33 IST
Last Updated 31 ಡಿಸೆಂಬರ್ 2021, 8:33 IST
ವಿವಿಧ ಬೆಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರ ತಾಲ್ಲೂಕು ಘಟಕ ವತಿಯಿಂದ ಗುರುವಾರ ಶಾಸಕ ದಿನಕರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು
ವಿವಿಧ ಬೆಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರ ತಾಲ್ಲೂಕು ಘಟಕ ವತಿಯಿಂದ ಗುರುವಾರ ಶಾಸಕ ದಿನಕರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು   

ಕುಮಟಾ: ಕೇಂದ್ರ ನೌಕರರಿಗೆ ಸಮಾನಾದ ವೇತನ, ಭತ್ಯೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ವತಿಯಿಂದ ಗುರುವಾರ ಶಾಸಕ ದಿನಕರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.

ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿಗೊಳಿಸಬೇಕು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಬೇಕು. ಜನ ಸಂಖ್ಯೆಗನುಣವಾಗಿ ಸರ್ಕಾರಿ ಹುದ್ದೆಗಳನ್ನು ಹೊಂದಿದ ಕೇರಳ ರಾಜ್ಯ ಮಾದರಿಯನ್ನು ರಾಜ್ಯದಲ್ಲೂ ಅನುಸರಿಸಬೇಕು. ಶಿಕ್ಷಕರ ವರ್ಗಾವಣೆಯಲ್ಲಿನ ನ್ಯೂನತೆ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಮನವಿಯಲ್ಲಿ ತಿಳಿಸಿದೆ.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಬಿ.ಡಿ. ನಾಯ್ಕ, ಕಾರ್ಯದರ್ಶಿ ಎನ್.ಆರ್. ನಾಯ್ಕ, ಪದಾಧಿಕಾರಿಗಳಾದ ಎಂ.ಎಂ. ಹೆಗಡೆ, ಉಲ್ಲಾಸ ನಾಯ್ಕ, ಕಿರಣ ನಾಯ್ಕ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.