ADVERTISEMENT

Teachers' Day | ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಿ: ಶಾಸಕ ಭೀಮಣ್ಣ ನಾಯ್ಕ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 4:31 IST
Last Updated 6 ಸೆಪ್ಟೆಂಬರ್ 2025, 4:31 IST
ಸಿದ್ದಾಪುರ ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ನಡೆದ ಶಿಕ್ಷಕರ ದಿನಾಚರಣೆ  ಮತ್ತು  ಗುರು ಗೌರವಾರ್ಪಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು 
ಸಿದ್ದಾಪುರ ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ನಡೆದ ಶಿಕ್ಷಕರ ದಿನಾಚರಣೆ  ಮತ್ತು  ಗುರು ಗೌರವಾರ್ಪಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು    

ಸಿದ್ದಾಪುರ: ‘ಸರ್ಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳು ಉತ್ತಮ ಹುದ್ದೆಯಲ್ಲಿರುವುದರ ಜೊತೆಗೆ ದೇಶದ ಪ್ರಗತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ  ಅವರು ಮಾತನಾಡಿದರು. ಬದಲಾಗುತ್ತಿರುವ ಶಿಕ್ಷಣ ನೀತಿಗೆ ಹೊಂದಿಕೊಂಡು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಬೇಕಾಗಿದೆ’ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಯೋಜನೆಗಳ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ, ತಾಲ್ಲೂಕು ಪಂಚಾಯಿತಿ ಇಒ ದೇವರಾಜ್ ಹಿತ್ತಲಕೊಪ್ಪ, ಟಿ.ಕೆ.ನಾಯ್ಕ, ಅರುಣ ಭಾಗ್ವತ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ.ನಾಯ್ಕ,ಉದಯ ಮೇಸ್ತಾ, ಎಂ.ಎಸ್.ಹೆಗಡೆ, ನಾಗರಾಜ ಮಡಿವಾಳ, ಬಸವರಾಜ ಕಡಪಟ್ಟಿ, ಎಸ್‍ಬಿಐ ಬ್ಯಾಂಕ್ ವ್ಯವಸ್ಥಾಪಕಿ ನಿರ್ಮಲ ಇತರರಿದ್ದರು.

ಇದೇ ಸಂದರ್ಭದಲ್ಲಿ ಆರು ಜನ ಶಿಕ್ಷಕರಿಗೆ ಡಾ.ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ನಿವೃತ್ತ ಶಿಕ್ಷಕರನ್ನು, ಸಾಧಕ ಶಿಕ್ಷಕರನ್ನು, ಜಿಲ್ಲಾ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು , ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು, ಸಾಧನೆ ಮಾಡಿದ ಪ್ರೌಢಶಾಲೆಗಳನ್ನು ಗೌರವಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ ಸ್ವಾಗತಿಸಿದರು. ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ವಿಜಯಾ ಶಾನಭಾಗ, ರಮೇಶ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ನಂತರ ಶಿಕ್ಷಕ-ಶಿಕ್ಷಕಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.