ADVERTISEMENT

ಮುಂಡಗೋಡ: ಗ್ರಾಮ ಪಂಚಾಯ್ತಿ ಸದಸ್ಯೆ ಕೊಲೆ

ಆರೋಪಿ, ಪತಿ ವಿಷ ಕುಡಿದು ಆತ್ಮಹತ್ಯೆ ಯತ್ನ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 5:38 IST
Last Updated 4 ಆಗಸ್ಟ್ 2022, 5:38 IST
ಪಾಳಾ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಕಮ್ಮ ಮೇಲಿಮನಿ ಕೊಲೆಯಾಗಿರುವ ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು
ಪಾಳಾ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಕಮ್ಮ ಮೇಲಿಮನಿ ಕೊಲೆಯಾಗಿರುವ ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು   

ಮುಂಡಗೋಡ: ತಾಲ್ಲೂಕಿನ ಪಾಳಾ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಕಮ್ಮ ಮೇಲಿನಮನಿ (36) ಅವರನ್ನು ಪತಿಯೇ ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ. ಆರೋಪಿಪತಿ ಬಸವರಾಜ ಮೇಲಿಮನಿ (55) ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಕಿಮ್ಸ್‌ಗೆ ದಾಖಲಿಸಲಾಗಿದೆ.

ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕುವ ವಿಚಾರದಲ್ಲಿ ಭಿನ್ನಾಭಿಪ್ರಾಯವಿತ್ತು, ಅಲ್ಲದೆ ಪತ್ನಿ ನಡತೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಚುನಾವಣೆ ಸಂದರ್ಭದಲ್ಲಿ ಮುದ್ರಿಸಿದ್ದ ಕರಪತ್ರಗಳನ್ನು ಮನೆಯಲ್ಲಿ ಜೋಡಿಸಿ ಅದರ ಮೇಲಿನ ಪತ್ನಿ ಭಾವಚಿತ್ರಕ್ಕೆ ಆರೋಪಿ ಕುಂಕುಮ ಎರಚಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್‌ಐ ಬಸವರಾಜ ಮಬನೂರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.