ಕಾರವಾರ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿಯ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಮುನ್ನ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೇರಿದಂತೆ ನೂರಾರು ಮಹಿಳೆಯರು ಒಂದೂವರೆ ಕಿ.ಮೀ ದೂರ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಬಂದರು.
ಮಾಲಾದೇವಿ ಮೈದಾನದಿಂದ ಕಲಾ ತಂಡಗಳ ಕುಣಿತದೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಡಮಾಮಿ ಕುಣಿತ, ಡೊಳ್ಳು ಕುಣಿತದ ತಂಡಗಳು ಮೆರವಣಿಗೆಯಲ್ಲಿ ನರ್ತಿಸುತ್ತ ಸಾಗಿದವು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮಹಿಳೆಯರು ಪಾಲ್ಗೊಂಡಿದ್ದರು.
ಕಾರವಾರ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಹುಲಿಗೆಮ್ಮ ಕುಕನೂರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸೋನಲ್ ಐಗಳ್ ಸೇರಿ ಹಲವು ಮಹಿಳಾ ಅಧಿಕಾರಿಗಳು ಮೆರವಣಿಗೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.