ADVERTISEMENT

 ಗ್ಯಾರಂಟಿಯಿಂದ ಎಲ್ಲ ಧರ್ಮದ ಮಹಿಳೆಯರಿಗೆ ಅನುಕೂಲ: ಅಂಜಲಿ ನಿಂಬಾಳ್ಕರ್

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 15:41 IST
Last Updated 27 ಮಾರ್ಚ್ 2024, 15:41 IST
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯಥರ್ಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯಥರ್ಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿದರು.   

ಹೊನ್ನಾವರ: ‘ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೆ ತಂದು ತಾನು ಕೊಟ್ಟ ಭರವಸೆ ಈಡೇರಿಸಿದೆ. ಯೋಜನೆಗಳಿಂದ ಎಲ್ಲ ಜಾತಿ ಹಾಗೂ ಧರ್ಮದ ಮಹಿಳೆಯರಿಗೆ ಅನುಕೂಲವಾಗಿದೆ’ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಮಾತನಾಡಿ, ‘ಅಂಜಲಿ ನಿಂಬಾಳ್ಕರ್ ಕ್ಷೇತ್ರದ ಹೊರಗಿನವರು ಎಂಬ ಟೀಕೆ ಸರಿಯಲ್ಲ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಖಾನಾಪುರವನ್ನು ನಿಂಬಾಳ್ಕರ್ ಶಾಸಕರಾಗಿ ಪ್ರತಿನಿಧಿಸಿದ್ದರು’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವ್ಕರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಮಾತನಾಡಿದರು.

ಪುಷ್ಪಲತಾ ಮಂಕಾಳ ವೈದ್ಯ, ಕೆಪಿಸಿಸಿ ಸದಸ್ಯ ಎಂ.ಎನ್. ಸುಬ್ರಹ್ಮಣ್ಯ, ಆರ್.ಎಚ್. ನಾಯ್ಕ, ರಾಮಾ ಮೊಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.