ADVERTISEMENT

ದಾಂಡೇಲಿ | 'ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಿಸಿ'

ಮಾಸಿಕ ಪ್ರಗತಿ ಪರಿಶೀಲನಾ ಸಭೆ: ಸತೀಶ ನಾಯ್ಕ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 6:20 IST
Last Updated 1 ಆಗಸ್ಟ್ 2025, 6:20 IST
ದಾಂಡೇಲಿ ತಾಲ್ಲೂಕಿನ ಆಡಳಿತ ಸೌಧದಲ್ಲಿ ಸತೀಶ ನಾಯ್ಕ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಮಾಸಿಕ ಸಭೆ ನಡೆಯಿತು 
ದಾಂಡೇಲಿ ತಾಲ್ಲೂಕಿನ ಆಡಳಿತ ಸೌಧದಲ್ಲಿ ಸತೀಶ ನಾಯ್ಕ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಮಾಸಿಕ ಸಭೆ ನಡೆಯಿತು    

ದಾಂಡೇಲಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಲಾಭ ಅರ್ಹ ಫಲಾನುಭವಿಗಳು ಪಡೆಯಲು ಅಧಿಕಾರಿಗಳ ಜೊತೆಗೆ ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿಯೂ ಶ್ರಮಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ನಾಯ್ಕ ಹೇಳಿದರು.

ನಗರದ ಅಂಬೇವಾಡಿಯ ತಾಲ್ಲೂಕು ಆಡಳಿತ ಸಭಾಭವನದಲ್ಲಿ  ಬುಧವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಬಡತನದ ನಿರ್ಮೂಲನೆ ಮತ್ತು ಮಹಿಳೆಯರನ್ನು ಮುಖ್ಯವಾಗಿಸಿಕೊಂಡು ಆರಂಭಿಸಲಾದ ಈ ಯೋಜನೆ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ’ ಎಂದರು.

ADVERTISEMENT

ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.  ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಗ್ಯಾರಂಟಿ ಯೋಜನಾ ಪ್ರಾಧಿಕಾರದ ಜಿಲ್ಲಾ ಘಟಕದ ಉಪಾಧ್ಯಕ್ಷ ನಾಗರಾಜ ಮುರ್ಡೇಶ್ವರ, ಗ್ಯಾರಂಟಿ, ಯೋಜನಾ ಪ್ರಾಧಿಕಾರದ ಜಿಲ್ಲಾ ಸದಸ್ಯರಾದ ಪಾಂಡುರಂಗ ಗೌಡ, ರಾಜೇಂದ್ರ, ರಾಣೆ, ಕುಮಾ‌ರ ಜಾವಳೇಕರ್, ಪುರುಷೋತ್ತಮ ಕಾಮತ, ಸುಮಾ ಉಗ್ರಾಣಕರ ಹಾಗೂ ಪ್ರಾಧಿಕಾರದ ತಾಲ್ಲೂಕು ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಸಿಬ್ಬಂದಿ ಇದ್ದರು.

ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ದಾಂಡೇಲಿ ತಾಲ್ಲೂಕು ಘಟಕದ ಅಧ್ಯಕ್ಷ ರಿಯಾಜ್ ಬಾಬು ಸೈಯದ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಸಿ.ಹಾದಿಮನಿ
ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.