ADVERTISEMENT

ಮಂಗಳೂರು: ಕಾಯಮಾತಿಗೆ ಆಗ್ರಹಿಸಿ ಅತಿಥಿ ಶಿಕ್ಷಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 7:54 IST
Last Updated 31 ಆಗಸ್ಟ್ 2020, 7:54 IST
ಅತಿಥಿ ಶಿಕ್ಷಕರು ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.
ಅತಿಥಿ ಶಿಕ್ಷಕರು ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.   

ಮಂಗಳೂರು: ಅತಿಥಿ ಶಿಕ್ಷಕರು ಕೋವಿಡ್ ಸಂಕಷ್ಟದಿಂದಾಗಿ ಉದ್ಯೋಗ ಇಲ್ಲದೇ ತತ್ತರಿಸುವಂತಾಗಿದೆ. ಕೂಡಲೇ ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅತಿಥಿ ಶಿಕ್ಷಕರು ಇಲ್ಲಿನ ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರ ನೇಮಕದಲ್ಲಿ ಅರೆಕಾಲಿಕ ಶಿಕ್ಷಕರು, ಅತಿಥಿ ಶಿಕ್ಷಕರಿಗೆ ಆದ್ಯತೆ ನೀಡುವ ರೀತಿಯಲ್ಲಿ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ನಮಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು. 12 ತಿಂಗಳ‌ವೇತನ ಪಾವತಿಸಬೇಕು. ಉದ್ಯೋಗ ಭದ್ರತೆ, ಇಎಸ್ಐ, ಇಪಿಎಫ್ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.