ಹಳಿಯಾಳ: ಪಟ್ಟಣದ ಗಣೇಶ ದೇವಸ್ಥಾನದಲ್ಲಿ ಮಂಗಳವಾರ ಗರ್ಭಗುಡಿಯ ಚೌಕಟ್ಟಿಗೆ ಅಳವಡಿಸಿದ್ದ ಬೆಳ್ಳಿ ಕವಚ ಕಳವಾಗಿದೆ.
ಇಬ್ಬರು ಕಳ್ಳರು ದೇವಸ್ಥಾನದ ಮುಖ್ಯದ್ವಾರದ ಬಲಬದಿ ಬಾಗಿಲಿನ ಕೊಂಡಿ ಮುರಿದು ಒಳ ನುಗ್ಗಿ ಸುಮಾರು ₹85 ಸಾವಿರ ಮೌಲ್ಯದ ಬೆಳ್ಳಿ ಕವಚ ಕಿತ್ತು ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ದೇವಸ್ಥಾನದ ಸಿಬ್ಬಂದಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.