ADVERTISEMENT

ಬಾಕಿ ಪ್ರಕರಣ ಇತ್ಯರ್ಥಕ್ಕೆ ರಾಜಿ ಸಂಧಾನ ಪರಿಹಾರ: ನ್ಯಾ.ವಿಭು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 17:39 IST
Last Updated 7 ಡಿಸೆಂಬರ್ 2025, 17:39 IST
ವಿಭು ಬಖ್ರು  
ವಿಭು ಬಖ್ರು     

ಕಾರವಾರ: ‘ಜಿಲ್ಲಾ ಸೆಷನ್ಸ್ ನ್ಯಾಯಾಲಯಗಳಲ್ಲಿ 21 ಲಕ್ಷ ಪ್ರಕರಣಗಳು ಬಾಕಿ ಇದ್ದು, ರಾಜಿ ಸಂಧಾನದಿಂದ ಅವುಗಳ ಶೀಘ್ರ ಇತ್ಯರ್ಥ ಸಾಧ್ಯವಿದೆ’ ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹೇಳಿದರು.

ಇಲ್ಲಿನ ಜಿಲ್ಲಾ ಸೆಷನ್ಸ್ ಕೋರ್ಟ್‌ ಆವರಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪರ್ಯಾಯ ವಿವಾದ ಪರಿಹಾರ (ಎಡಿಆರ್) ಕೇಂದ್ರದ ಕಟ್ಟಡ ಉದ್ಘಾಟಿಸಿ, ಮಾತನಾಡಿದರು.

‘ನ್ಯಾಯಾಂಗ ಇಲಾಖೆಯಲ್ಲಿ ಸೀಮಿತ ಸಂಪನ್ಮೂಲಗಳಿವೆ. ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಅವಧಿಯಲ್ಲಿ ಪರಿಹರಿಸಲು ಕೆಲಸದ ಮಾದರಿ ವಿಭಿನ್ನವಾಗಬೇಕಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.