ADVERTISEMENT

ನೋಡಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಕದ್ರಾ ಜಲಾಶಯದಿಂದ ಕಾಳಿ ನದಿಗೆ ನೀರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 14:21 IST
Last Updated 22 ಜುಲೈ 2021, 14:21 IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯ ಭರ್ತಿಯಾಗಿದ್ದು, ಎಂಟು ಗೇಟ್‌ಗಳಿಂದ 40 ಸಾವಿರ ಕ್ಯುಸೆಕ್ ನೀರನ್ನು ಕಾಳಿ ನದಿಗೆ ಬಿಡಲಾಗುತ್ತಿದೆ. ಹಳಿಯಾಳ ತಾಲ್ಲೂಕಿನ ಅಂಬೇವಾಡಿಯಲ್ಲಿ ಹಳ್ಳದ ನೀರು ಉಕ್ಕಿ ಹರಿಯುತ್ತಿದ್ದ ಸಮೀಪದ ಕಬ್ಬಿನ ಗದ್ದೆ ಜಲಾವೃತವಾಗಿದೆ. ಶಿರಸಿ ತಾಲ್ಲೂಕಿನ ಗುಡ್ನಾಪುರ ಕೆರೆಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ದಡದಲ್ಲಿರುವ ಬಂಗಾರೇಶ್ವರ ದೇವಸ್ಥಾನ ಜಲಾವೃತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.