ADVERTISEMENT

ಭಟ್ಕಳದ ಮುಟ್ಟಳ್ಳಿಯಲ್ಲಿ ಕುಸಿದ ಗುಡ್ಡ: ಅವಶೇಷಗಳಡಿ ಸಿಲುಕಿದ ನಾಲ್ವರು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 4:40 IST
Last Updated 2 ಆಗಸ್ಟ್ 2022, 4:40 IST
ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿರುವುದು
ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿರುವುದು   

ಭಟ್ಕಳ: ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದಿದೆ. ಮನೆ ಸಂಪೂರ್ಣ ಕುಸಿದಿದ್ದು, ಮಣ್ಣು, ಅವಶೇಷಗಳಡಿ ನಾಲ್ವರು ಸಿಲುಕಿದ್ದಾರೆ.

ಮುಟ್ಟಳ್ಳಿ ಗೌರಮ್ಮಜ್ಜಿ ಮನೆ ಇದಾಗಿದೆ. ಮನೆಯಲ್ಲಿದ್ದ ಲಕ್ಷ್ಮಿ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ.

ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಚಿರೆಕಲ್ಲು ಮಿಶ್ರಿತ ಮಣ್ಣು ಕುಸಿದಿದೆ. ಮನೆ ಸಂಪೂರ್ಣ ನಾಶವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದೆ.

ADVERTISEMENT

ಭಟ್ಕಳದ ನಾಗ ಮಾಸ್ತಿ ದೇವಸ್ಥಾನದ ಮೂರ್ತಿಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ರೈಲು ನಿಲ್ದಾಣ ಸಮೀಪದಲ್ಲಿರುವ ಈ ದೇವಸ್ಥಾನವು ಇತಿಹಾಸ ಪ್ರಸಿದ್ಧವಾಗಿದೆ. ದೇವಸ್ಥಾನದ ನಾಲ್ಕೈದು ಮೂರ್ತಿಗಳು ನೀರು ಪಾಲಾಗಿವೆ.

ತಾಲ್ಲೂಕಿನ ವೆಂಕಟಾಪುರದಲ್ಲಿ ಪ್ರವಾಹದಿಂದ ಹುಲ್ಲುಕಿ ಸೇತುವೆಯ ಬಳಿ ರೈಲು ಹಳಿಗೂ ಹಾನಿಯಾಗಿದೆ. ಕೊಂಕಣ ರೈಲ್ವೆಯ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಭಟ್ಕಳ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.