ADVERTISEMENT

ಭಟ್ಕಳ | ಭಾರಿ ಮಳೆ: ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 4:22 IST
Last Updated 26 ಜುಲೈ 2025, 4:22 IST
   

ಭಟ್ಕಳ: ತಾಲ್ಲೂಕಿನಾದ್ಯಂತ ಶುಕ್ರವಾರ ಸುರಿದ ಬಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಾಡವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅರವಕ್ಕಿ ಗ್ರಾಮದ ನಿವಾಸಿ ಅಜಿತ್ ಶೆಟ್ಟಿಯವರ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ.

ಬಡೇಭಾಗ ನಿವಾಸಿ ಪುರ್ಸು ಶಿವು ಮರಾಠಿ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ಮೂಡಭಟ್ಕಳ ನಿವಾಸಿ ಮಂಕಾಳಿ ದೇವಡಿಗ ಮನೆಯ ಚಾವಣಿ ಕುಸಿದು ಹಾನಿಯಾಗಿದೆ.

ADVERTISEMENT

ಪಟ್ಟಣದ ಮುಖ್ಯರಸ್ತೆ, ಸುಭಾಸ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು. ಸಂಶುದ್ದೀನ ವೃತ್ತದಲ್ಲಿ ಮಳೆ ನೀರು ಜನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ನದಿ, ಹೊಳೆ, ಹಳ್ಳಗಳು ಭರ್ತಿಯಾಗಿ ಅಪಾಯದ ಮಟ್ಟಕ್ಕೆ ತಲುಪಿದೆ. ಹೊಳೆಯಂಚಿನ ತೋಟ, ತಗ್ಗು ಪ್ರದೇಶದ ಭತ್ತದ ಗದ್ದೆಗಳಿಗೂ ನೀರು ನುಗ್ಗಿದೆ.

ಶಾಲೆಗಳಿಗೆ ರಜೆ: ಮಳೆ ಸುರಿಯುತ್ತಿರು ವುದರಿಂದ ಮುಂಜಾಗ್ರತಾ ಕ್ರಮವಾಗಿ ಶನಿವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.