ಕಾರವಾರ: ನಗರವೂ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಎರಡು ದಿನಗಳ ಬಳಿಕ ಮತ್ತೆ ಮಳೆ ಶುರುವಾಗಿದ್ದು, ರೈತರ ಸಂತಸಕ್ಕೆ ಕಾರಣವಾಗಿದೆ. ಬುಧವಾರ ಬೆಳಿಗ್ಗೆ 11ರ ಸುಮಾರಿಗೆ ಶುರುವಾದ ಮಳೆ ಅರ್ಧ ಗಂಟೆ ಜೋರಾಗಿ ಸುರಿಯಿತು.
ನಿಸರ್ಗ ಚಂಡಮಾರುತದ ಸಂದರ್ಭದಲ್ಲಿ ಜಿಲ್ಲೆಯ ಕರಾವಳಿಯಲ್ಲಿ ಜೋರಾಗಿ ಮಳೆಯಾಗಿತ್ತು. ಬಳಿಕ ಕಡಿಮೆಯಾಗಿ ಎರಡು ದಿನಗಳಿಂದ ಬಿಸಿಲು ಕಾಣಿಸಿಕೊಂಡಿತ್ತು. ಬುಧವಾರ ಬೆಳಿಗ್ಗೆಯಿಂದಲೇ ದಟ್ಟವಾಗಿ ಮೋಡ ಕವಿದು, ಗುಡುಗು ಸಹಿತ ಮಳೆಯಾಯಿತು.
ಸಮುದ್ರದಲ್ಲಿ ದೊಡ್ಡ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಮೀನುಗಾರಿಕಾ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.