ADVERTISEMENT

ಮುಂಡಗೋಡದಲ್ಲಿ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 15:44 IST
Last Updated 18 ಏಪ್ರಿಲ್ 2020, 15:44 IST
ಮುಂಡಗೋಡ ತಾಲ್ಲೂಕಿನ ಮಳಗಿ ಸನಿಜ ರಾಜ್ಯ ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿರುವುದು
ಮುಂಡಗೋಡ ತಾಲ್ಲೂಕಿನ ಮಳಗಿ ಸನಿಜ ರಾಜ್ಯ ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿರುವುದು   

ಮುಂಡಗೋಡ (ಉತ್ತರ ಕನ್ನಡ):ತಾಲ್ಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಕೆಲವೆಡೆ ಮರಗಳು ರಾಜ್ಯ ಹೆದ್ದಾರಿ ಮೇಲೆ ಉರುಳಿ ಬಿದ್ದಿವೆ.

ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಬಿರುಸಿನ ಮಳೆಯಾಗಿದೆ. ಮಳಗಿ ಗ್ರಾಮದ ಸನಿಹ ಮರವೊಂದು ರಸ್ತೆ ಮೇಲೆ ಬಿದ್ದು ವಾಹನ ಸಂಚಾರಕ್ಕೆ ಅಡೆತಡೆಯಾಗಿದೆ. ಇದೇ ಸ್ಥಳದಲ್ಲಿ ದಾರಿಮಾಡಿಕೊಂಡು ಹೋಗಲು ಯತ್ನಿಸಿದ್ದ ಅಂಬುಲೆನ್ಸ್ ಸಹ ರಸ್ತೆ ಬದಿ ಸಿಲುಕಿದೆ. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT